ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಭಾಗದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಅಭಿವೃದ್ಧಿಗೆ ಮುಂಬರುವ ಬಜೆಟ್‌ನಲ್ಲಿ ಪ್ರಾಮುಖ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾರ್ಕಳದ ಹೆಲಿಪ್ಯಾಡ್‌ನಲ್ಲಿ ಪರಶುರಾಮ್ ಥೀಮ್ ಪಾರ್ಕ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಬೆಲ್ಟ್ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ಹೊಂದಿದೆ. ಬಜೆಟ್‌ನಲ್ಲಿ ಕರಾವಳಿ ಪ್ರದೇಶಕ್ಕೆ ಪ್ರಾಮುಖ್ಯತೆ ನೀಡುತ್ತೇವೆ. ಇಲ್ಲಿನ ಆರ್ಥಿಕ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗುವುದು. ಮೂಲ ಉದ್ಯೋಗಕ್ಕಾಗಿ ಬೆಂಬಲವನ್ನು ವಿಸ್ತರಿಸಲಾಗುವುದು. ಕರಾವಳಿ ಪ್ರವಾಸೋದ್ಯಮವನ್ನು ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಾಗ ಭೇಟಿ ನೀಡುತ್ತಿರುವ ಕುರಿತು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ , ಗುಲ್ಬರ್ಗ, ಬೆಂಗಳೂರು, ಮೈಸೂರು, ಮಂಗಳೂರು ರ‍್ಯಾಲಿಗಳಲ್ಲಿ ಮೋದಿ ಭೇಟಿ ವೇಳೆ ಜನ ಸೇರಿದ್ದಕ್ಕೆ ಸಿದ್ದರಾಮಯ್ಯ ಆತಂಕಗೊಂಡಿದ್ದಾರೆ. ತಮ್ಮ ಭಯವನ್ನು ಮರೆ ಮಾಚಲು ಸಿದ್ದರಾಮಯ್ಯ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.