Tuesday, July 5, 2022

Latest Posts

ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ: ಬಿ.ಜಿ.ಪಾಟೀಲ್

ಹೊಸ ದಿಗಂತ ವರದಿ, ಕಲಬುರಗಿ:

ಹಿಂದಿನ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾಯ೯ಗಳನ್ನು ಮಾಡಿದ್ದು,ಮುಂಬರುವ ದಿನಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಿದೆ, ಹೀಗಾಗಿ ನಮ್ಮ ಭಾಗ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ತಾವೆಲ್ಲರೂ ಬಿಜೆಪಿ ಗೆ ಮತ ನೀಡಬೇಕೆಂದು ಕಲಬುರಗಿ-ಯಾದಗಿರಿ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ ಹೇಳಿದರು.
ಅವರು ಗುರುವಾರ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸುರಪುರ ಮಂಡಲದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ನರೇಂದ್ರ ಮೋದಿಯವರ ಆಡಳಿತ, ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತವು ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡು,ಜನಪರ ಆಡಳಿತ ನೀಡುತ್ತಿದೆ. ಹೀಗಾಗಿ ಎಲ್ಲರೂ ಅಭಿವೃದ್ಧಿ ಪರವಾಗಿ ಇರುವ ಪಕ್ಷವನ್ನು ಬೆಂಬಲಿಸಿ,ತಮ್ಮ ಮತವನ್ನು ನೀಡಬೇಕೆಂದು ಹೇಳಿದರು.
ಸುರಪುರ ಮಂಡಲದ ಅಧ್ಯಕ್ಷ ಮೆಲಪ್ಪ ಗುಳಗಿ,ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ. ಶರಣಭೂಪಾಲರೇಡ್ಡಿ,ನಗರ ನೀರು ಸರಬರಾಜು ಹಾಗೂ ಒಳಚರಂಡಿ ಅಧ್ಯಕ್ಷ, ಶಾಸಕ ರಾಜುಗೌಡ,ನಗರ ಸಭೆಯ ಅಧ್ಯಕ್ಷರು ಶ್ರೀಮತಿ ಸುಜಾತಾ,ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ರಾಜ ಹಣಮಂತ ನಾಯಕ,ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಸಣ್ಣಗೌಡ, ಯಲಪ್ಪ, ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಗುರು ಕಾಮಾ, ದೇವೆಂದ್ರನಾಥ, ವೆಂಕಟರೆಡ್ಡಿ, ಮಹೇಶ ಪಾಟೀಲ,ದೊಡ್ಡ ದೆಸಾಯಿ, ಮರಲಿಗಂಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ನಗರ ಸಭೆ ಅಧ್ಯಕ್ಷರು ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss