Friday, August 12, 2022

Latest Posts

ನಕಲಿ ಮತದಾನಕ್ಕೆ ಯತ್ನ: ಬಿಜೆಪಿ ಕಾರ್ಯಕರ್ತರ ಆಕ್ರೋಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಕಲಬುರಗಿ:

ಮಹಾ ನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ವಾಡ೯ ನಂ-24ರ, ಮತಗಟ್ಟೆ ಸಂಖ್ಯೆ-194ರಲ್ಲಿ ನಕಲಿ ಮತದಾನಕ್ಕೆ ಪ್ರಯತ್ನ ನಡೆದಾಗ, ಬಿಜೆಪಿ ಪಕ್ಷದ ಕಾಯ೯ಕತ೯ರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ವ್ಯಕ್ತಿಯೊಬ್ಬರು ನಕಲಿ ಮತದಾನ ಮಾಡಿದ್ದಾನೆ ಎಂದು ಆರೋಪಿಸಿ, ಬಿಜೆಪಿ ಕಾರ್ಯಕರ್ತರು ಆತನನ್ನು ತಡೆದಿದ್ದಾರೆ. ಇದೇ ಸಂದರ್ಭದಲ್ಲಿ ಆತನನ್ನು ಪೋಲಿಸರಿಗೆ ಒಪ್ಪಿಸುವ ಸಂದರ್ಭ  ನಕಲಿ ಮತದಾನ ಮಾಡಿದ ವ್ಯಕ್ತಿ ಪರಾರಿಯಾಗಿದ್ದಾನೆ.
ನಕಲಿ ಮತದಾನ ಮಾಡುತ್ತಿರುವ ವ್ಯಕ್ತಿಯೂ ಸ್ಥಳದಲ್ಲೇ ಆಧಾರ್ ಕಾರ್ಡ್, ಆಟೋವನ್ನು ಬಿಟ್ಟು ಪರಾರಿಯಾಗಿದ್ದಾನೆ.
ಇದರಿಂದ ನಕಲಿ ಮತದಾನಕ್ಕೆ ಆಸ್ಪದ ನೀಡಬಾರದೆಂದು ಬಿಜೆಪಿ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಕೆಲಕಾಲ ಸ್ಥಳದಲ್ಲಿ ತೀವ್ರ ವಾಗ್ವಾದ ಮತ್ತು ಗೊಂದಲ ಉಂಟಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss