Sunday, August 14, 2022

Latest Posts

ಪ್ರತಿಯೊಬ್ಬರಿಗೂ ಲಸಿಕೆ ಕೊಡಿಸಲು ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು: ಜಿಲ್ಲಾಧ್ಯಕ್ಷ ಎ.ಮುರುಳಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಚಿತ್ರದುರ್ಗ:

ಬೂತ್ ಮಟ್ಟದಲ್ಲಿ ಪ್ರತಿಯೊಬ್ಬರಿಗೂ ತಪ್ಪದೆ ಲಸಿಕೆ ಹಾಕಿಸಿ ಕೊರೋನಾ ವಿರುದ್ದ ಎಚ್ಚರಿಕೆಯಿಂದ ಇರುವಂತೆ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ-4 ದಾವಣಗೆರೆ ರಸ್ತೆಯಲ್ಲಿರುವ ಓಜಾಸ್ ಹೋಟೆಲ್ ಸಭಾಂಗಣದಲ್ಲಿ ನಡೆದ ಬಿಜೆಪಿ ಚಿತ್ರದುರ್ಗ ಗ್ರಾಮಾಂತರ ಮಂಡಲ ನಾಲ್ಕನೆ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಕೋವಿಡ್ ಒಂದು ಮತ್ತು ಎರಡನೇ ಅಲೆ ನಿಗ್ರಹಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್‌ಡೌನ್‌ನಂತ ಮಹತ್ವದ ನಿರ್ಧಾರ ಕೈಗೊಂಡಿದ್ದರಿಂದ ಸಾವು-ನೋವಿನ ಸಂಖ್ಯೆ ಕಡಿಮೆಯಾಗಿದೆ. ಇನ್ನು ಮೂರನೆ ಅಲೆ ಎದುರಾಗುವ ಸಂಭವಗಳಿರುವುದರಿಂದ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಲಸಿಕೆ ಹಾಕಿಸಿ ಎಲ್ಲರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಬೇಕಲ್ಲದೆ ಬೂತ್ ಸಮಿತಿಯನ್ನು ರಚಿಸುವಂತೆ ಸೂಚಿಸಿದರು.
ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಂದಿ ನಾಗರಾಜ್ ಮಾತನಾಡಿ, ಕೊರೋನಾ ಸಂದಿಗ್ದ ಪರಿಸ್ಥಿತಿಯಲ್ಲಿ ಬಡವರು, ಕಾರ್ಮಿಕರು, ಶ್ರಮಿಕ ವರ್ಗದವರಿಗೆ ತೊಂದರೆಯಾಗಬಾರದೆನ್ನುವ ಉದ್ದೇಶದಿಂದ ಗರೀಬ್ ಕಲ್ಯಾಣ ಯೋಜನೆಯಡಿ ನವೆಂಬರ್‌ವರೆಗೆ ಪಡಿತರ ಧಾನ್ಯಗಳನ್ನು ನೀಡುವ ಪ್ರಧಾನಿ ಮೋದಿರವರ ಯೋಜನೆಗಳನು ಜನತೆಗೆ ತಿಳಿಸಬೇಕೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಬೂತ್ ಮಟ್ಟದಲ್ಲಿ ಎಲ್ಲರೂ ಮಾಸ್ಕ್ ಧರಿಸಿ, ಸ್ಯಾನಿಟೈಸ್ ಬಳಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಜನತೆಯಲ್ಲಿ ಅರಿವು ಮೂಡಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು.
ಮಂಡಲ ಪ್ರಭಾರಿ ಜಿ.ಟಿ.ಸುರೇಶ್, ಉಪಾಧ್ಯಕ್ಷರುಗಳಾದ ಕಲ್ಲೇಶಯ್ಯ, ಚಂದ್ರಿಕಾ ಲೋಕನಾಥ್, ಬಿಜೆಪಿ.ಜಿಲ್ಲಾ ಯುವ ಮೋರ್ಚ ಅಧ್ಯಕ್ಷ ಹನುಮಂತೆಗೌಡ, ಜಿಲ್ಲಾ ಕಾರ್ಯದರ್ಶಿ ಮತ್ತು ಮಂಡಲ ಉಸ್ತುವಾರಿ ಎ.ರೇಖ, ಯುವ ಮುಖಂಡ ಜಿ.ಎಸ್.ಅನಿತ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಟಿ.ಎಸ್.ವಸಂತಕುಮಾರ್, ಜಿ.ವೀರೇಶ್ ಜಾಲಿಕಟ್ಟೆ, ಮುಕ್ಕಣ್ಣ ಉಪಸ್ಥಿತರಿದ್ದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss