ಗಣೇಶ ಚತುರ್ಥಿ, ದುರ್ಗಾ ಪೂಜೆಗಾಗಿ ರಸ್ತೆಯಲ್ಲಿ ಪೆಂಡಾಲ್ ನಿರ್ಮಾಣಕ್ಕಿಲ್ಲ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಗಣೇಶ ಚತುರ್ಥಿ, ದುರ್ಗಾ ಪೂಜೆ ಸೇರಿ ಹಬ್ಬಗಳ ಆಚರಣೆ ವೇಳೆ ರಸ್ತೆಗಳಲ್ಲಿ ಪೆಂಡಾಲ್, ಸ್ವಾಗತ ಕಮಾನು ನಿರ್ಮಿಸಲು ಅವಕಾಶ ನೀಡದಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್‌ಜಿಟಿ) ಜಿಲ್ಲಾಡಳಿತಕ್ಕೆ ಆದೇಶ ನೀಡಿದೆ.

ಪೆಂಡಾಲ್‌ಗಳಂಥ ನಿರ್ಮಾಣಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ ಎಂದು ಆರೋಪಿಸಿ ಛತ್ತೀಸ್‌ಗಢದ ಸ್ವಯಂಸೇವಕ ಸಂಸ್ಥೆ ನಾಗರಿಕ ಸಂಘರ್ಷ ಸಮಿತಿ ಎನ್‌ಜಿಟಿಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಎನ್‌ಜಿಟಿ, ಪೆಂಡಾಲ್ ಮತ್ತು ಸ್ವಾಗತ ಕಮಾನುಗಳನ್ನು ನಿರ್ಮಿಸುವ ವಿಚಾರವನ್ನು ಜಿಲ್ಲಾಡಳಿತಗಳು ಗಂಭೀರವಾಗಿ ಪರಿಗಣಿಸಬೇಕು.

ರಸ್ತೆಗಳ ಮೇಲೆ ಪೆಂಡಾಲ್ ಹಾಗೂ ಸ್ವಾಗತ ಕಮಾನುಗಳನ್ನು ನಿರ್ಮಿಸಲು ಅನುಮತಿ ನೀಡಬಾರದು. ಅನುಮತಿ ಇಲ್ಲದೆ ಪೆಂಡಾಲ್ ಹಾಕಿದರೆ ಅದನ್ನು ಕೂಡಲೆ ತೆರವುಗೊಳಿಸಬೇಕು. ಅಲ್ಲದೆ, ನಿರ್ಮಿಸಿದವರಿಗೆ ದಂಡ ವಿಧಿಸಬೇಕೆಂದು ಜಿಲ್ಲಾಡಳಿತಗಳಿಗೆ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!