ಐಪಿಎಲ್​ಗೆ ಕಾಡಿದ ಕೋವಿಡ್ ಬಾಧೆ: ಡೆಲ್ಲಿ ಸಹಾಯಕ ಸಿಬ್ಬಂದಿಗೆ ಪಾಸಿಟಿವ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ ಈಗಾಗಲೇ ಅನೇಕ ಪಂದ್ಯಗಳು ನಡೆದಿದ್ದು, ಇದರ ಮಧ್ಯೆಯೇ ಇದೀಗ ಡೆಲ್ಲಿ ಕ್ಯಾಪಿಟಲ್ಸ್​​ ತಂಡದ ಸಹಾಯಕ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಗೊಂಡಿದೆ. ಪ್ರಸಕ್ತ ಸಾಲಿನ ಐಪಿಎಲ್​ನಲ್ಲಿ ಕಾಣಿಸಿಕೊಂಡಿರುವ ಮೊದಲ ಕೋವಿಡ್ ಸೋಂಕು ಇದಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಫಿಸಿಯೋ ಪ್ಯಾಟ್ರಿಕ್​ ಫರ್ಹಾರ್ಟ್​​ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಅವರನ್ನು ಪ್ರತ್ಯೇಕವಾಗಿರಿಸಿ, ವೈದ್ಯಕೀಯ ತಂಡ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಐಪಿಎಲ್​ ಪ್ರಕಟಣೆ ಹೊರಡಿಸಿದೆ.
ಕೊರೊನಾ ವೈರಸ್​ನಿಂದಾಗಿ ಕಳೆದ ವರ್ಷ ಭಾರತದಲ್ಲಿ ಆಯೋಜನೆಗೊಂಡಿದ್ದ ಇಂಡಿಯನ್​ ಪ್ರೀಮಿಯರ್ ಲೀಗ್​ ಅರ್ಧಕ್ಕೆ ಮೊಟಕುಗೊಂಡಿತ್ತು. ಇದಾದ ಬಳಿಕ ದುಬೈನ ವಿವಿಧ ಮೈದಾನಗಳಲ್ಲಿ ಉಳಿದ ಪಂದ್ಯ ಆಯೋಜಿಸಲಾಗಿತ್ತು. ದೇಶದಲ್ಲಿ ಇದೀಗ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿರುವ ಕಾರಣ ಮಹಾರಾಷ್ಟ್ರದ ನಾಲ್ಕು ಮೈದಾನಗಳಲ್ಲಿ ಟೂರ್ನಿ ಆಯೋಜನೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!