ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಕುಂದಾಪುರ:
ಕೊಲ್ಲೂರು ಮೂಕಾಂಬಿಕೆಯ ದರುಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಾರ್ಡ್ ಕಡ್ಡಾಯ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.
ಉಡುಪಿ ಜಿಲ್ಲಾಧಿಕಾರಿ ಆದೇಶದಂತೆ ನೂತನ ಕ್ರಮವು ಸೆ. 4 ಶನಿವಾರದಿಂದಲೇ ಜಾರಿಗೆ ಬಂದಿದೆ.
ದೇವಸ್ಥಾನ ಪ್ರವೇಶಿಸುವ ಮುನ್ನ ಪ್ರತಿಯೊಬ್ಬ ಭಕ್ತರು ತನ್ನ ಆಧಾರ್ ಕಾರ್ಡ್ ತೋರಿಸಬೇಕು. ಪ್ರವೇಶದ್ವಾರದಲ್ಲಿ ಭಕ್ತಾದಿಗಳ ಹೆಸರು, ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೇ ಕೇರಳ ರಾಜ್ಯದಿಂದ ಬರುವ ಭಕ್ತರು ಆಧಾರ್ ಕಾರ್ಡ್ ಜೊತೆಗೆ ದೇವಸ್ಥಾನ ಪ್ರವೇಶಿಸುವ 72 ಗಂಟೆಗಳೊಳಗೆ
ಮಾಡಿಸಲಾದ ಕೋವಿಡ್ 19 ಆರ್ ಟಿಪಿಸಿಆರ್ ನೆಗೆಟಿವ್ ವರದಿ ಹಾಜರುಪಡಿಸುವುದು ಕಡ್ಡಾಯ ಎಂದು ತಿಳಿಸಿದೆ.