ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದಾರೆ.
ಗುಬ್ಬಿ ತಾಲೂಕಿನ ರೈಲ್ವೇ ನಿಲ್ದಾಣದಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಹಾಗೂ ಗುಬ್ಬಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 73ರ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜಕೀಯಕ್ಕಿಂತ ಅಭಿವೃದ್ಧಿ ಮುಖ್ಯ ಎಂದು ಹೇಳಿದ ಅವರು, ನಗರದ ಜನತೆಯ ಬಹುದಿನದ ಬೇಡಿಕೆಯಾಗಿದ್ದ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಶೀಘ್ರ ಆರಂಭವಾಗಲಿದೆ. ಅಲ್ಲದೇ ರೈಲ್ವೆ ಅಧಿಕಾರಿಗಳಿಗೆ ಕರೆ ಮಾಡಿ ಪ್ರಸ್ತುತ ಯೋಜನೆಗೆ ಬದಲಾಗಿ ಮೇಲ್ಸೇತುವೆ ರಸ್ತೆಯನ್ನು 25 ಅಡಿಗಳಿಗೆ ವಿಸ್ತರಿಸುವಂತೆ ನಿರ್ದೇಶನ ನೀಡಿದರು.
ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗುವುದು ಎಂದು ಸೋಮಣ್ಣ ಭರವಸೆ ನೀಡಿದರು.