spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಷ್ಟ್ರನಿರ್ಮಾಣಕ್ಕೆ ಗುಣಮಟ್ಟ ಶಿಕ್ಪಣ ಸಹಕಾರಿ: ಸಚಿವ ಡಾ. ಅಶ್ವತ್ಥನಾರಾಯಣ

- Advertisement -Nitte

ಹೊಸ ದಿಗಂತ ವರದಿ, ನಾಗಮಂಗಲ :

ಗುಣಮಟ್ಟದ ಶಿಕ್ಷಣದಿಂದ ಒಳ್ಳೆಯ ವ್ಯಕ್ತಿತ್ವಗಳು ರೂಪುಗೊಂಡು ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಯಾವಾಗಲೂ ಶ್ರೇಷ್ಠತೆಯ ಅನ್ವೇಷಣೆಯಲ್ಲಿ ತೊಡಗಿರಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಕರೆ ನೀಡಿದರು.
ತಾಲೂಕಿನ ಬಿ.ಜಿ.ನಗರದ ಬಿಜಿಎಸ್ ಸಭಾ ಭವನದಲ್ಲಿ ನಡೆದ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾವುದೇ ವ್ಯಕ್ತಿ ಉತ್ತಮ ಮಾರ್ಗದಲ್ಲಿ ನಡೆಯಬೇಕಾದರೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದೆ. ಅಂಥ ಶಿಕ್ಷಣ ನೀಡಲು ರಾಜ್ಯ ಸರಕಾರ ಎಲ್ಲ ಕ್ರಮಗಳನ್ನೂ ವಹಿಸಿದೆ ಎಂದರು.
ವಿದ್ಯಾರ್ಥಿಗಳು ಯಾವಾಗಲೂ ಸಕಾರಾತ್ಮಕ ದಿಕ್ಕಿನತ್ತಲೇ ಯೋಚನೆ ಮಾಡಬೇಕು. ದೊಡ್ಡ ಸಾಧನೆಗಳನ್ನು ಮಾಡಬೇಕಾದರೆ ದೊಡ್ಡ ದೊಡ್ಡ ಕಸನುಗಳನ್ನು ಕಾಣಬೇಕು. ವಿದ್ಯಾರ್ಥಿಗಳು ಕಲಿಕೆಯ ಸಂದರ್ಭದಲ್ಲಿಯೇ ಇಂಥ ಕನಸುಗಳನ್ನು ಕಾಣಬೇಕು. ರಾಷ್ಟ್ರ ನಿರ್ಮಾಣದ ಬಗ್ಗೆ ಆಲೋಚನೆ ಮಾಡಬೇಕು ಎಂದು ಸಚಿವರು ನುಡಿದರು.
ಕಲಿಯುವ ಸಂದರ್ಭದಲ್ಲೇ ಬೆಳೆಯುವ ಅವಕಾಶಗಳೂ ಸಿಗುತ್ತವೆ. ಅಂಥ ಅವಕಾಶಗಳನ್ನು ವಿದ್ಯಾಭ್ಯಾಸದ ಸಂದರ್ಭದಲ್ಲಿಯೇ ಮೈಗೂಡಿಸಿಕೊಳ್ಳಬೇಕು. ಒಮ್ಮೆ ಅವಕಾಶಗಳನ್ನು ಕೈಚೆಲ್ಲಿದರೆ ಮುಂದೆ ಪರಿತಪಿಸಬೇಕಾಗುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಕಿವಿಮಾತು ಹೇಳಿದರು.
ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹಾಗೂ ಸಮಾಜಕ್ಕೆ ಕೊಡುಗೆ ನೀಡಬಲ್ಲ ಪ್ರತಿಭಾವಂತರನ್ನು ಸೃಷ್ಟಿ ಮಾಡುವಲ್ಲಿ ಆದಿಚುಂಚನಗಿರಿ ಮಠದ ಶಿಕ್ಷಣ ಸಂಸ್ಥೆಗಳು ದೊಡ್ಡ ಕೊಡುಗೆಯನ್ನೇ ನೀಡುತ್ತಿವೆ. ಆದಿಚುಂಚನಗಿರಿ ವಿವಿಯೂ ಶಿಕ್ಷಣದ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಮಹತ್ವದ ಕಾಣಿಕೆ ನೀಡುತ್ತಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರು ಹೇಳಿದರು.
ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರು ಉದ್ಘಾಟನಾ ಭಾಷಣ ಮಾಡಿದರು. ಸಾನ್ನಿಧ್ಯ ವಹಿಸಿದ್ದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ವಿವಿ ಕುಲಪತಿ, ಕುಲ ಸಚಿವರು ಮುಂತಾದವರು ಹಾಜರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss