ʻನಮ್ಮ ಹಸಿರು ಭೂಮಿಗಾಗಿʼ: ಗ್ರೀನ್ ಜೆರ್ಸಿ ತೊಟ್ಟು ಮೈದಾನಕ್ಕೆ ಇಳಿದ RCB!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆರ್‌ಸಿಬಿ (RCB) ತನ್ನ 7ನೇ ಪಂದ್ಯದಲ್ಲಿ ರಾಜಸ್ಥಾನ್ (Rajasthan Royals) ರಾಯಲ್ಸ್ ವಿರುದ್ಧ ತವರಿನಲ್ಲಿ ಆಡುತ್ತಿದ್ದು, ಇಂದು ಕೆಂಪು ಮತ್ತು ಕಪ್ಪು ಮಿಶ್ರಿತ ಜೆರ್ಸಿ ಬದಲಿಗೆ ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ.

2011ರ ಐಪಿಎಲ್​ನಿಂದ ಆರ್​ಸಿಬಿ ಒಂದು ಪಂದ್ಯದಲ್ಲಿ ಗ್ರೀನ್ ಜೆರ್ಸಿ (Green Jersey) ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್​ಸಿಬಿ ಪ್ರತಿ ವರ್ಷ ಐಪಿಎಲ್‌ನಲ್ಲಿ (IPL 2023) ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ.

16ನೇ ಆವೃತ್ತಿಯಲ್ಲಿ 7ನೇ ಪಂದ್ಯವಾಡುತ್ತಿರುವ ಆರ್‌ಸಿಬಿ ತವರಿನಲ್ಲೇ ಪಿಂಕ್ ಆರ್ಮಿ ವಿರುದ್ಧ ಹಸಿರು ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್‌ಸಿಬಿ ತಂಡ ಈ ವಿಭಿನ್ನ ಹಾದಿ ಹಿಡಿದಿದೆ.

ʻನಮ್ಮ ಹಸಿರು ಭೂಮಿಗಾಗಿʼ ಎಂಬ ಸಂಕಲ್ಪದೊಂದಿಗೆ ʻವಿಶೇಷ ಪಂದ್ಯಕ್ಕೆ ವೇದಿಕೆ ಸಿದ್ಧವಾಗುತ್ತಿದ್ದಂತೆ, ನಮ್ಮ ಪರಿಸರಕ್ಕಾಗಿ ಪ್ರತಿಜ್ಞೆ ತೆಗೆದುಕೊಳ್ಳೋಣʼ, ʻಮುಂದಿನ ಪೀಳಿಗೆಗಾಗಿ ಹಸಿರು ಪರಿಸರ ಉಳಿಸೋಣʼ ಎಂದು ಅಭಿಮಾನಿಗಳಿಗೆ ಕರೆ ನೀಡಿದೆ.

ಈಗಾಗಲೇ 6 ಪಂದ್ಯಗಳನ್ನಾಡಿರುವ ಆರ್‌ಸಿಬಿ 3 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ 6ನೇ ಸ್ಥಾನದಲ್ಲಿದೆ. ಭಾನುವಾರ ಪಿಂಕ್‌ ಆರ್ಮಿ ವಿರುದ್ಧ ಗೆದ್ದರೆ ಪಾಯಿಂಟ್ಸ್‌ ಟೇಬಲ್‌ ಪಟ್ಟಿಯಲ್ಲಿ ಒಂದು ಸ್ಥಾನ ಮೇಲಕ್ಕೇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!