ಪ್ರಧಾನಿ ಮೋದಿ ಕನಸು”ವಿಕಸಿತ ಭಾರತ”ಕ್ಕಾಗಿ ಅವರೇ ಮತ್ತೊಮ್ಮೆ ಪ್ರಧಾನಿಯಾಗಬೇಕು: ವಿಜಯೇಂದ್ರ

ದಿಗಂತ ವರದಿ ಹಾಸನ :

ಪ್ರಧಾನಿ‌ ನರೇಂದ್ರಮೋದಿ ಅವರ ಕನಸು 2047 ರ ವೇಳೆಗೆ ವಿಕಸಿತ ಭಾರತ ಆಗಿ ಪರಿವರ್ತನೆ ಆಗಬೇಕು ಎಂಬುದು, ಅದಕ್ಕಾಗಿ ಮತ್ತೊಮ್ಮೆ ನರೇಂದ್ರಮೋದಿ ಅವರು ಪ್ರಧಾನಮಂತ್ರಿ ಆಗಲೇಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಗರದಲ್ಲಿ ಇಂದು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ನಾಮಪತ್ರ ಸಲ್ಲಿಕೆ ಹಾಗೂ ಬೃಹತ್ ಸಮಾವೇಶಕ್ಕೆ ಆಗಮಿಸಿರುವ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಇವತ್ತು ರಾಜ್ಯದಲ್ಲಿ ಅಭೂತಪೂರ್ವವಾದಂತಹ ಬೆಂಬಲ ಬಿಜೆಪಿ ಹಾಗೂ ಎನ್‌ಡಿಎ ಮಿತ್ರ ಪಕ್ಷವಾಗಿರುವ ಜೆಡಿಎಸ್ ಪಕ್ಷಕ್ಕೂ ಕೂಡ ಸಿಗುತ್ತಿದೆ. ನಾನು ಕೂಡ ಜಿಲ್ಲೆಯ ಬೇರೆ ಬೇರೆ ಕಡೆ ಪ್ರವಾಸ ಮಾಡುತ್ತಿದ್ದೇನೆ.
ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಪಾರ್ಟಿ ಅಧಿಕಾರಕ್ಕೆ ಬರಬೇಕು. ನರೇಂದ್ರ ಮೋದಿ ಅವರ ಒಂದು ಕನಸಿದೆ. 2047 ರ ವೇಳೆಗೆ ವಿಕಸಿತ ಭಾರತ ಆಗಿ ಪರಿವರ್ತನೆ ಆಗಬೇಕು ಅದಕ್ಕಾಗಿ ಮತ್ತೊಮ್ಮೆ ನರೇಂದ್ರಮೋದಿ ಪ್ರಧಾನಮಂತ್ರಿ ಆಗಬೇಕು ಎಂದರು.

ಮೋದಿಯವರ ಕನಸು ನನಸಾಗುವ ವಾತಾವರಣ ನಿರ್ಮಾಣವಾಗಿದೆ. ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ನರೇಂದ್ರಮೋದಿ ಅವರ ಜನಪ್ರಿಯತೆ ದಿನೇ ದಿನೇ ಹೆಚ್ಚಾಗುತ್ತಿರುವುದು ನಮಗೆ ದೊಡ್ಡ ಶಕ್ತಿಯನ್ನು ತಂದುಕೊಟ್ಟಿದೆ.
ಹಾಸನ ಲೋಕಸಭಾ ಕ್ಷೇತ್ರದಲ್ಲೂ ಸಹ ನಮಗೆ ಸಂಪೂರ್ಣ ವಿಶ್ವಾಸವಿದೆ . ಬಿಜೆಪಿ-ಜೆಡಿಎಸ್ ಪಾರ್ಟಿ ಎರಡು ಒಂದಾಗಿ ಎನ್‌ಡಿಎ ಅಭ್ಯರ್ಥಿ ಆಗಿರುವ ಪ್ರಜ್ವಲ್‌ರೇವಣ್ಣ ಅವರನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸುತ್ತೇವೆ. ಎಲ್ಲರೂ ಒಗ್ಗಟ್ಟಾಗಿ ದುಡಿಯುತ್ತೇವೆ ಎಂದರು.

ಪ್ರಜ್ವಲ್ ರೇವಣ್ಣ ಅವರ ನಾಮಪತ್ರ ಸಲ್ಲಿಕೆಗೆ ಪ್ರೀತಂಗೌಡ ಗೈರು ವಿಚಾರವಾಗಿ ಪ್ರಕ್ರಿಯಿಸಿದ ಅವರು, ನಿನ್ನೆ ದಿನ ಜಿಲ್ಲೆಯ ನಾಯಕರು ಕುಳಿತು ಪದಾಧಿಕಾರಿಗಳ ಸಭೆ ಮಾಡಿದ್ದಾರೆ. ಒಂದೆರಡು ದಿನ ವಾತಾವರಣ ತಿಳಿಯಾಗುತ್ತೆ. ನಮ್ಮ ಕರ್ತವ್ಯ ಕೂಡ ಇರುತ್ತದೆ.‌ಜೆಡಿಎಸ್ ಪಕ್ಷ ಎನ್‌ಡಿಎ ತೆಕ್ಕೆಗೆ ಬಂದ ನಂತರ ನಮ್ಮ ಅಭ್ಯರ್ಥಿಗಳನ್ನು ಅವರ ಕಾರ್ಯಕರ್ತರು ತಳಮಟ್ಟದಿಂದ ಬೆಂಬಲಿಸಬೇಕು. ಎಲ್ಲಿ ಜೆಡಿಎಸ್ ಅಭ್ಯರ್ಥಿಗಳಿದ್ದಾರೆ ಅವರನ್ನು ಸಂಪೂರ್ಣವಾಗಿ ಬೆಂಬಲಿಸಬೇಕು, ಗೆಲ್ಲಿಸಬೇಕು, ನಮ್ಮ ಕರ್ತವ್ಯ ಕೂಡ ಇದೆ.

ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು ಇದು ನಮ್ಮ ಮುಂದೆ ಇರುವ ಗುರಿ. ಯಾರು, ಯಾರನ್ನು ಭೇಟಿ ಮಾಡಬೇಕು ಅನ್ನುವುದಕ್ಕಿಂತ ಹೆಚ್ಚಾಗಿ, ನಮ್ಮ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ ಅವರು ಗೆಲ್ಲಬೇಕು. ಅವರು ಗೆಲ್ಲಬೇಕು ಎಂದರೆ ನಮ್ಮ ಪಕ್ಷದ ಎಲ್ಲಾ ಕಾರ್ಯಕರ್ತರು, ಪ್ರತಿಯೊಬ್ಬರು ಕೆಲಸ ಮಾಡಬೇಕು.‌ ಪ್ರತಿಯೊಬ್ಬರು ಎಂದರೆ ಅದರಲ್ಲಿ ಪ್ರೀತಂಗೌಡ ಕೂಡ ಸೇರುತ್ತಾರೆ ಎಂದರು.

ಬಿಜೆಪಿ-ಜೆಡಿಎಸ್ ಜೆಡಿಎಸ್ ಮೈತ್ರಿಗೆ ದೇವೇಗೌಡರು ಕೂಡ ಆಶೀರ್ವಾದ ಮಾಡಿದ್ದಾರೆ.‌ ಅದಕ್ಕೆ ಕಾರಣ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಧಾನಮಂತ್ರಿ ನರೇಂದ್ರಮೋದಿಯವರ ಬಗ್ಗೆ ಇಟ್ಟಿರುವ ಅಚಲ ವಿಶ್ವಾಸ.‌ ನನಗೆ ವಿಶ್ವಾಸವಿದೆ, ಈ ದೇಶದ ಸುರಕ್ಷತೆ, ದೇಶದ ಸರ್ವತೋಮುಕ ಅಭಿವೃದ್ಧಿ ದೃಷ್ಟಿಯಿಂದ ಮೋದಿಯವರೇ ಪ್ರಧಾನಮಂತ್ರಿ ಆಗಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!