Wednesday, August 17, 2022

Latest Posts

ರೌಡಿಗಳಿಗೆ ಬೆಳ್ಳಂಬೆಳಗ್ಗೆ ಖಾಕಿ ಶಾಕ್: 570 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ, ಮಾರಕಾಸ್ತ್ರಗಳ ವಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸ ದಿಗಂತ ವರದಿ, ಹುಬ್ಬಳ್ಳಿ:

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಫರಾದಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಧಾರವಾಡ ಆಯುಕ್ತಾಲಯ ವ್ಯಾಪ್ತಿಯಲ್ಲಿ ಪೊಲೀಸರು
570ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಕಾರ್ಯಚರಣೆ ನಡೆಸಿದ್ದಾರೆ.
ನಗರದ ಉತ್ತರ, ದಕ್ಷಿಣ ಮತ್ತು ಧಾರವಾಡದ ಎಸಿಪಿ ವ್ಯಾಪ್ತಿಯ ಪೊಲೀಸರು ದಾಳಿ ಮಾಡಿ ಮಾರಾಕಾಸ್ತ್ರಗಳನ್ನು ವಶ ಪಡಿಸಿಕೊಂಡು ಎಚ್ಚರಿಕೆ ನೀಡಿದ್ದಾರೆ.
ಲಾಕ್‌ಡೌನ್ ಪ್ರಾರಂಭವಾದ ನಂತರ ಪೊಲೀಸ್ ಸಿಬ್ಬಂದಿ ಕೊರೋನಾ ನಿಯಂತ್ರಣದಲ್ಲಿ ತೊಡಗಿದ್ದ ಕಾರಣ ರೌಡಿಗಳು ಭಯವಿಲ್ಲದೆ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದರು.
ಕೊಲೆ, ಸುಲಿಗೆ, ದರೋಡೆ, ಮನೆ ಕಳ್ಳತನ, ಜೂಜಾಟ, ಗಾಂಜಾ ಮಾರಾಟ, ಡ್ರಗ್ಸ್ ಮಾರಾಟ, ಸೈಬರ್ ಕ್ರೈಂಗಳು ಹೆಚ್ಚಾಗಿದ್ದವು. ಅನ್‌ಲಾಕ್ ನಂತರ ಪ್ರತಿದಿನ ಅಪರಾಧಗಳು ನಡೆಯುತ್ತಿದ್ದು, ಇದನ್ನು ನಿಯಂತ್ರಿಸಲು ಪೊಲೀಸ್ ಆಯುಕ್ತ ಲಾಭೂರಾಮ್ ಡಿಸಿಪಿಗಳೊಂದಿಗೆ ಸಭೆ ನಡೆಸಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಎಸಿಪಿಗಳಾದ ವಿನೋದ ಮುಕ್ತೆದಾರ, ಆರ್.ಕೆ. ಪಾಟೀಲ ಹಾಗೂ ಅನುಷಾ ಮಾರ್ಗದರ್ಶನದಲ್ಲಿ ದಾಳಿಗಳು ನಡೆದಿವೆ.
ಉತ್ತರ ವಿಭಾಗದಲ್ಲೇ ಸುಮಾರು 250ಕ್ಕೂ ಅಧಿಕ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಕೆಲವೆಡೆ ಮಾರಕಾಸ್ತ್ರಗಳು, ಲಾಂಗ್ ಪತ್ತೆಯಾಗಿವೆ. ಕಮರಿಪೇಟೆ, ಕೇಶ್ವಾಪುರದಲ್ಲಿ ಎರಡು ಪ್ರಕರಣ ದಾಖಲಿಸಲಾಗಿದೆ. ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ಎಸಿಪಿ ಮುಕ್ತೆದಾರ, ಇನ್ಸ್‌ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದಲ್ಲಿ 21 ರೌಡಿಗಳ ಮನೆ ಮೇಲೆ ದಾಳಿ ನಡೆದಿದೆ.
ದಕ್ಷಿಣ ವಿಭಾಗದಲ್ಲೂ ಎಲ್ಲ ಠಾಣೆಗಳ ವ್ಯಾಪ್ತಿಯಲ್ಲಿ ಸುಮಾರು 250 ಕ್ರಿಮಿನಲ್ ಹಿನ್ನೆಲೆ ಉಳ್ಳವರ ಮನೆ ಮೇಲೆ ದಾಳಿ ನಡೆಸಿದ್ದು, ಹಳೆ ಹುಬ್ಬಳ್ಳಿ, ಘಂಟಿಕೇರಿ ಮುಂತಾದೆಡೆ ಮಾರಕಾಸ್ತ್ರ ಸಿಕ್ಕಿವೆ. ಸುಮಾರು 7ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.
ಧಾರವಾಡ ವಿಭಾಗ ವ್ಯಾಪ್ತಿಯಲ್ಲಿ ಇನ್ಸ್‌ಪೆಕ್ಟರ್‌ಗಳಾದ ಸಂಗಮೇಶ ದಿಡಿಗನಾಳ, ರಮೇಶ ಹೂಗಾರ, ಬಸಾಪುರ ಮುಂತಾದವರು ದಾಳಿ ಮಾಡಿದ್ದು, ನೂರಕ್ಕೂ ಹೆಚ್ಚು ರೌಡಿಗಳ ಮನೆ ಶೋಧಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!