Friday, July 1, 2022

Latest Posts

ಕುಂಭಮೇಳದಲ್ಲಿ ಭಾಗಿಯಾದ ರಾಜ್ಯದ ಯಾತ್ರಿಗಳಿಗೆ ಕೋವಿಡ್ ತಪಾಸಣೆ ಕಡ್ಡಾಯ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಹರಿದ್ವಾರ ಕುಂಭಮೇಳದಲ್ಲಿ ಭಾಗಿಯಾಗಿದ್ದ ಯಾತ್ರಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು , ಈ ನಿಟ್ಟಿನಲ್ಲಿ ಯಾತ್ರಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಸ್ವಯಂ ತಪಾಸಣೆಗೆ ಒಳಗಾಗುವಂತೆ ಮನವಿ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕಗೊಂಡು ಕೊರೋನಾ ಪರೀಕ್ಷೆಗೆ ಒಳಪಡಬೇಕು. ಕೊರೋನಾ ಪರೀಕ್ಷೆ ವರದಿಯಲ್ಲಿ ನೆಗೆಟಿವ್ ಬಂದ ನಂತರವಷ್ಟೆ ಯಾತ್ರಿಕರು ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಬೇಕೆಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss