ಮೊದಲ ಬಾರಿಗೆ ಒಂದೇ ದಿನ ಐದು ಹೊಸ ವಂದೇ ಭಾರತ್ ರೈಲುಗಳಿಗೆ ಸಿಗಲಿದೆ ಚಾಲನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತೀಯ ರೈಲ್ವೆ ಇಲಾಖೆಯು ಜೂನ್ 26 ರಿಂದ ಐದು ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಐದು ಸೆಮಿ ಹೈಸ್ಪೀಡ್ ರೈಲುಗಳಿಗೆ ಚಾಲನೆ ನೀಡುವ ನಿರೀಕ್ಷೆ ಇದೆ.

ಮುಂಬೈ-ಗೋವಾ, ಬೆಂಗಳೂರು-ಹುಬ್ಬಳ್ಳಿ, ಪಾಟ್ನಾ-ರಾಂಚಿ, ಭೋಪಾಲ್-ಇಂಧೋರ್ ಮತ್ತು ಭೋಪಾಲ್-ಜಬಲ್ಪುರ ನಡುವಿನ ವಂದೇ ಭಾರತ್ ರೈಲುಗಳಿಗೆ ಚಾಲನೆ ಸಿಗಲಿದೆ.

ಒಡಿಶಾ ದುರಂತದ ನಂತರ ರೈಲ್ವೆ ಸಚಿವಾಲಯವು ಮುಂಬೈ-ಗೋವಾ ವಂದೇ ಭಾರತ್ ರೈಲಿನ ಉದ್ಘಾಟನೆಯನ್ನು ರದ್ದುಗೊಳಿಸಿತ್ತು.
ಇದೀಗ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಐದು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!