WORLD CUP 2023 | 48 ವರ್ಷದಲ್ಲಿ ಇದೇ ಮೊದಲು, ವಿಶ್ವಕಪ್‌ನಲ್ಲಿ ಅದ್ಭುತ ಸಾಧನೆ ಮಾಡಿದ ಬುಮ್ರಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿನ್ನೆ ವಾಂಖೆಡೆ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಅತ್ಯದ್ಭುತ ಪ್ರದರ್ಶನ ನೀಡಿದೆ. ಈ ಮೂಲಕ ವಿಶ್ವಕಪ್‌ನಲ್ಲಿ ಸೆಮೀಸ್ ತಲುಪಿದ ಮೊದಲ ತಂಡ ಎನಿಸಿಕೊಂಡಿದೆ.

ಇದರ ಜೊತೆಗೆ ನಿನ್ನೆ 48 ವರ್ಷಗಳಲ್ಲೇ ಮೊದಲ ಬಾರಿಗೆ ದೊಡ್ಡ ದಾಖಲೆಯೊಂದನ್ನು ವೇಗಿ ಜಸ್ಪ್ರೀತ್ ಬುಮ್ರಾ ಮುರಿದು ಹಾಕಿದ್ದಾರೆ.

ವಿಶ್ವಕಪ್ ಪಂದ್ಯದ ವೇಳೆ ತಂಡದ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಮೊದಲ ಭಾರತೀಯ ಕ್ರಿಕೆಟ್ ತಂಡದ ಬೌಲರ್ ಎನಿಸಿಕೊಂಡಿದ್ದಾರೆ.

ಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಮೊದಲ ಓವರ್ ಬುಮ್ರಾ ಬೌಲಿಂಗ್ ಮಾಡಿದ್ದರು. ಮೊದಲ ಎಸೆತದಲ್ಲೇ ಲಂಕಾ ಬ್ಯಾಟರ್ ಪಾತುಮ್ ನಿಸ್ಸಾಂಕಾರನ್ನು ಔಟ್ ಮಾಡಿದ್ದಾರೆ.

ಬ್ಯಾಟ್‌ಗೆ ಸಿಗದ ಬಾಲ್ ವೇಗವಾಗಿ ಬಂದು ಪ್ಯಾಡ್‌ಗೆ ತಾಗಿದ್ದು, ಅಂಪೈರ್ ಅದನ್ನು ಔಟ್ ಎಂದು ತೀರ್ಪು ನೀಡಿದರು, ಡಿಆರ್‌ಎಸ್‌ನಲ್ಲೂ ಅದು ಔಟ್ ಎಂದು ದೃಢಪಟ್ಟಿತು, ಭಾರತದ ಯಾವ ಬೌಲರ್ ಕೂಡ ಈ ಸಾಧನೆಯನ್ನು ಮಾಡಿಲ್ಲ.

ಇತ್ತ ವಿರಾಟ್ ಕೊಹ್ಲಿ ಕೂಡ ಇನ್ನೊಂದು ದಾಖಲೆ ಮಾಡಿದ್ದು, ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದು ಇತಿಹಾಸ ನಿರ್ಮಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಎಂಟು ಬಾರಿ ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!