Friday, September 19, 2025

ವಿಶ್ವದಲ್ಲೇ ಮೊದಲ ಬಾರಿಗೆ ಕರಡಿಗೆ ಕೃತಕ ಕಾಲು ಜೋಡಣೆ ಯಶಸ್ವಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವದಲ್ಲಿಯೇ ಮೊಟ್ಟಮೊದಲ ಬಾರಿಗೆ ಕರಡಿಗೆ ಕೃತಕ ಕಾಲು ಜೋಡಿಸಿರುವ ಅಪರೂಪದ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ.

ಕಾಲಿಲ್ಲದ ಕರಡಿಗೆ ಕೃತಕ ಕಾಲು ಜೋಡಣೆ ಮಾಡಿ ಯಶಸ್ವಿಯಾಗಿದ್ದಾರೆ.ಕಾಲು ಕಳೆದುಕೊಂಡಿದ್ದ ವಸಿಕರನ್ ಎಂಬ ಕರಡಿಗೆ ಮೂರು ದಿನಗಳ ಕಾಲ ಕಾಲು ಜೋಡಣೆಯ ಕಾರ್ಯ ನಡೆದಿತ್ತು.ಈ ಮೂಲಕ ಪಶು ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಕರಡಿ ಕಾಲು ಜೋಡಣೆಯ ಮೈಲಿಗಲ್ಲಾಗಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನ ಮತ್ತು ವೈಲ್ಡ್ ಲೈಫ್ sos ಸಂಸ್ಥೆ, ಕರ್ನಾಟಕ ಅರಣ್ಯ ಇಲಾಖೆ ಸಹಯೋಗದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ ಮಾಡಿದ್ದಾರೆ. 2019 ರಲ್ಲಿ ಬಳ್ಳಾರಿ ಅರಣ್ಯ ಪ್ರದೇಶದಿಂದ ಕರಡಿಯನ್ನು ರಕ್ಷಣೆ ಮಾಡಲಾಗಿತ್ತು. ಬೇಟೆಗಾರರ ಬಲೆಗೆ ಸಿಲುಕಿ ಜೀವನ್ಮರಣ ಹೋರಾಟ ನಡೆಸಿದ್ದ ಕರಡಿಯ (ವಸಿಕರನ್), ಹಿಂಬದಿ ಎಡಗಾಲು ಮುರಿದು ನರಳಾಡಿತ್ತು. ನಂತರ ಅದನ್ನು ಬನ್ನೇರುಘಟ್ಟ ಕರಡಿ ಆರೈಕೆ ಕೇಂದ್ರಕ್ಕೆ ಕರೆತರಲಾಗಿತ್ತು.

ಗಾಯಗೊಂಡಿದ್ದ ಕರಡಿಗೆ ಚಿಕಿತ್ಸೆ ನೀಡಿದ ಬಳಿಕ ಆರೋಗ್ಯ ಸುಧಾರಣೆಯಾಗಿತ್ತು. ಅಲ್ಲ ದೇ ಮೂರು ಕಾಲಿನಿಂದ ನಡೆಯಲು ಕರಡಿ ಅಭ್ಯಾಸ ಮಾಡಿಕೊಂಡಿತ್ತು. ಪ್ರಾಣಿಗಳ ಜಾಗತಿಕ 11ಮೂಳೆ ತಜ್ಞರಾದ ಅಮೆರಿಕದ ಡೆರಿಕ್ ಕಂಪನಾ ಬನ್ನೇರುಘಟ್ಟಕ್ಕೆ ಭೇಟಿ ನೀಡಿ, ಕರಡಿ ವಸಿಕರನ್ ಓಡಾಡು111111ವುದನ್ನ ಗಮನಿಸಿದ್ದರು. ಮಣ್ಣು ತೋಡಲು, ಮರ ಹತ್ತಲು, ಮೇವು ಸಂಗ್ರಹಕ್ಕೆ ಕೃತಕ ಕಾಲನ್ನ ತಜ್ಞರು ಸಿದ್ದಪಡಿಸಿದ್ದರು. ಸದ್ಯ ಕೃತಕ ಕಾಲಿನಿಂದ ಮೊದಲಿನ ಹಾಗೆ ಕರಡಿ ಓಡಾಟ ನಡೆಸಿದೆ.

ಇದನ್ನೂ ಓದಿ