ಮೊದಲ ಬಾರಿಗೆ ಸುಪ್ರೀಂಕೋರ್ಟ್ ನಿಂದ ಕಲಾಪಗಳ ನೇರ ಪ್ರಸಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದ ಕಲಾಪಗಳನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳವಾರ ನೇರ ಪ್ರಸಾರ ಮಾಡಿದೆ ಇನ್ನು ಮುಂದೆಯೂ ನಡೆಯಲಿದ್ದು, ಕಲಾಪದ ಪ್ರಕ್ರಿಯೆಗಳನ್ನು ಜನಸಾಮಾನ್ಯರು webcast.gov.in/scindia/ನಲ್ಲಿ ವೀಕ್ಷಿಸಬಹುದು.

2018ರ ಸೆಪ್ಟೆಂಬರ್ 27ರಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ ನೀಡಿದ್ದ ಮಹತ್ವದ ತೀರ್ಪಿನಲ್ಲಿ ಸಾಂವಿಧಾನಿಕ ಪ್ರಾಮುಖ್ಯತೆಯ ವಿಷಯಗಳ ಕುರಿತ ಕಲಾಪದ ಪ್ರಕ್ರಿಯೆಗಳ ವೆಬ್‌ಕಾಸ್ಟ್‌ ಅಥವಾ ನೇರ ಪ್ರಸಾರಕ್ಕೆ ಹಸಿರು ಬಾವುಟ ನೀಡಿದ್ದರು. ಇದಾದ ನಾಲ್ಕು ವರ್ಷಗಳ ನಂತರ ಇಂದಿನಿಂದ ಸಂವಿಧಾನ ಪೀಠದ ಪ್ರಕ್ರಿಯೆಗಳ ಲೈವ್ ಸ್ಟ್ರೀಮಿಂಗ್ ನೀಡಲಾಗಿದೆ.

ಸೋಮವಾರ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್, ಇದುವರೆಗೆ ಯೂಟ್ಯೂಬ್‌ನಲ್ಲಿ ಪ್ರಸಾರವಾದ ಪ್ರಕ್ರಿಯೆಗಳನ್ನು ಲೈವ್ ಸ್ಟ್ರೀಮಿಂಗ್ ಮಾಡಲು ಸುಪ್ರೀಂಕೋರ್ಟ್ ಶೀಘ್ರದಲ್ಲೇ ತನ್ನದೇ ಆದ ವ್ಯವಸ್ಥೆ ಪರಿಚಯಿಸಲಿದೆ ಎಂದು ಹೇಳಿದ್ದರು. ಸಿಜೆಐ ನೇತೃತ್ವದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಸರ್ವಾನುಮತದ ನಿರ್ಧಾರ ತೆಗೆದುಕೊಂಡ ನಂತರ ಈ ಘೋಷಣೆ ಮಾಡಲಾಗಿತ್ತು.ಸದ್ಯ ಯೂಟ್ಯೂಬ್ ಮೂಲಕ ಸುಪ್ರೀಂಕೋರ್ಟ್ ವಿಚಾರಣೆಗಳನ್ನು ನೇರ ಪ್ರಸಾರ ವೀಕ್ಷಿಸಬಹುದಾಗಿದೆ.

ಆಗಸ್ಟ್ 26ರಂದು ಮೊದಲ ಬಾರಿಗೆ ಸುಪ್ರೀಂಕೋರ್ಟ್ ವೆಬ್‌ಕಾಸ್ಟ್ ಪೋರ್ಟಲ್ ಮೂಲಕ ಆಗಿನ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ನೇತೃತ್ವದ ಪೀಠದ ವಿಚಾರಣೆಯನ್ನು ನೇರ ಪ್ರಸಾರ ಮಾಡಲಾಗಿತ್ತು. ಆದರೆ, ಅದು ನ್ಯಾ.ರಮಣ ಅವರು ಅಧಿಕಾರಾವಧಿ ಮುಕ್ತಾಯವಾಗಿದ್ದರಿಂದ ಔಪಚಾರಿಕ ಪ್ರಕ್ರಿಯೆಯಾಗಿತ್ತು.

ಇಂದು ಸಾಂವಿಧಾನಿಕ ಪೀಠದ ಕಲಾಪವನ್ನು ನೇರ ಪ್ರಸಾರ ಮಾಡಿರುವ ಸುಪ್ರೀಂಕೋರ್ಟ್, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಾತಿ ಕುರಿತ ವಿಚಾರಣೆಯನ್ನು ಕೈಗೆತ್ತಿಗೊಂಡಿದೆ. ಜೊತೆಗೆ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ವಿಚಾರಣೆಯನ್ನೂ ಸುಪ್ರೀಂಕೋರ್ಟ್ ನೇರ ಪ್ರಸಾರ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!