ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 7, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಂಡ್ಯ ಜಿಲ್ಲಾಸ್ಪತ್ರೆಗೆ ನಿತ್ಯ 7 ಕೆಎಲ್ ಆಕ್ಸಿಜನ್ ಪೂರೈಕೆ: ಡಾ.ಸುಧಾಕರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………


ಹೊಸ ದಿಗಂತ ವರದಿ, ಮಂಡ್ಯ :

ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಗೆ ಪ್ರತಿನಿತ್ಯ 7 ಕೆಎಲ್ ಲಿಕ್ವಿಡ್ ಆಕ್ಸಿನ್ ಪೂರೈಸಲು ಹಾಗೂ 300 ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಸರಬರಾಜು ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಮಿಮ್ಸ್ ಸಭಾಂಗಣದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ವೈದ್ಯರು, ಇತರೆ ಅಧಿಕಾರಿಗಳೊಂದಿಗೆ ಜಿಲ್ಲೆಯ ಕೋವಿಡ್ ನಿಯಂತ್ರಣ ಮತ್ತು ನಿರ್ವಹಣೆ ಕುರಿತಂತೆ ಪ್ರಗತಿಪರಿಶೀಲನೆ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಮೀಸಲಿಟ್ಟಿರುವ 400 ಹಾಸಿಗೆಗಳನ್ನು 600ಕ್ಕೆ ಹೆಚ್ಚಿಸಲಾಗುವುದು. ಕೋವಿಡೇತರ ರೋಗಿಗಳು,

ಖಾಸಗೀ ಆಸ್ಪತ್ರೆಗಳಲ್ಲಿ ಶೇ. 50ರಷ್ಟು ಹಾಸಿಗೆ 
ಜಿಲ್ಲೆಯಲ್ಲಿ 47 ಖಾಸಗಿ ಆಸ್ಪತ್ರೆಗಳಿದ್ದು, ಅಲ್ಲಿರುವ ಹಾಸಿಗೆಗಳ ಪೈಕಿ ಶೇ. 50ರಷ್ಟನ್ನು ಕೋವಿಡ್ ರೋಗಿಗಳಿಗಾಗಿಯೇ ಮೀಸಲಿಡಬೇಕು ಎಂದು ಈಗಾಗಲೇ ತಾಕೀತು ಮಾಡಿದ್ದು, ಈ ಬಗ್ಗೆ ನಿಗಾ ವಹಿಸಲು ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದರು.
ಕೋವಿಡ್ ಹಾಗೂ ನಾನ್ ಕೋವಿಡ್, ಎಮರ್ಜೆನ್ಸಿ ಪ್ರಕರಣಗಳಲ್ಲಿ ರೋಗಿಗಳಿಗೆ ಖಾಸಗಿ ಆಸ್ಪತೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತದೆ. ಅದರ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಹೇಳಿದರು.

ಟಾಸ್ಕ್ ಪೋರ್ಸ್ ರಚಿಸಲು ಸೂಚನೆ 
ಪ್ರತಿ ಬೂತ್ ಹಂತದಲ್ಲಿ ಕೋವಿಡ್ ಟಾಸ್ಕ್ ಪೋರ್ಸ್ ರಚಿಸಲು ಸರ್ಕಾರ ಆದೇಶಿಸಿದೆ. ಅದರಲ್ಲಿ ಶಿಕ್ಷಣ ಇಲಾಖೆಯಿಂದ ಬಿಎಲ್ಒ, ಆರೋಗ್ಯ ಇಲಾಖೆ ಸಿಬ್ಬಂದಿ, ಅಗನವಾಡಿ ಕಾರ್ಯಕರ್ತೆ ಹಾಗೂ ಲೈನ್ ಡಿಪಾಟ್‌ಗಳಿಗೆ ಅಧಿಕಾರಿಗಳಿರಲಿದ್ದಾರೆ. ದೀರ್ಘಕಾಲಕ್ಕೆ ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಅನುಷ್ಠಾನಗೊಳಿಸಲು ಈ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss