ಇವರು ಕೊಡುವ ಹಣಕ್ಕೆ ಎರಡುವರೆ ಕೆಜಿ ಅಕ್ಕಿ ಮಾತ್ರ ಬರುತ್ತೆ: ಕಾಂಗ್ರೆಸ್ ಸರಕಾರ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಕಾಂಗ್ರೆಸ್ ಸರಕಾರ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿ ಬದಲು ಹಣ ಕೂಡುವುದಾಗಿ ಹೇಳಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿ ಈಗ ಅಕ್ಕಿಯ ಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಐದು ಕೆಜಿ ಕೊಡುವುದಾಗಿ ಹೇಳುತ್ತಿದ್ದಾರೆ. ಈ ಮೂಲಕ ಮಾತಿಗೆ ತಪ್ಪುತ್ತಿದ್ದಾರೆ ಎಂದು ಆರೊಪಿಸಿದರು.

ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಅಕ್ಕಿಗೆ ಐವತ್ತರಿಂದ ಆರವತ್ತು ರೂಪಾಯಿ ಬೆಲೆ ಇದೆ. ಇವರು ಮೂವತ್ತು ರೂಪಾಯಿ ಕೊಟ್ಟರೆ ಜನರಿಗೆ ಎರಡುವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ. ಕರೆಂಟ್ ವಿಚಾರದಲ್ಲಿಯೂ ಕಂಡಿಷನ್ ಹಾಕಿ ಅದನ್ನೇ ಮಾಡಿದ್ದಾರೆ‌. ಹತ್ತು ಕೆಜಿ ಅಕ್ಕಿಯನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಡಿಸೆಂಬರ್ ವರೆಗೂ ಕೊಟ್ಟಿದೆ‌. ಇವರೇ ಮೊದಲೆಲ್ಲಾ‌ ಎಷ್ಟೇ ಖರ್ಚಾದರೂ ಅಕ್ಕಿ ಕೊಡುವುದಾಗಿ ಹೇಳಿದವರು ಈಗ ಮಾತಿಗೆ ತಪ್ಪಿ ಜನರಿಗೆ ಎರಡೂವರೆ ಕೆಜಿ ಮಾತ್ರ ದೊರೆಯುವಂತೆ ಮಾಡಿದ್ದಾರೆ ಎಂದರು.

ಅಕ್ಕಿ ಬದಲು ದುಡ್ಡು ಕೊಟ್ಟರೆ ತಿನ್ನಲಾಗುತ್ತಾ ಎಂದಿದ್ದ ಸಿದ್ದರಾಮಯ್ಯ
ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯಅಕ್ಕಿ ಬದಲು ದುಡ್ಡು ಕೊಟ್ಟರೆ ತಿನ್ನಲಾಗುತ್ತಾ ಎಂದಿದ್ದರು. ಈಗ ನಾವು ಅದೇ ಪ್ರಶ್ನೆಯನ್ನು ಅವರಿಗೆ ಕೇಳುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೀರಿ, ಜನರಿಗೆ ಅಕ್ಕಿ ಕೊಡಿ. ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಅಕ್ಕಿಗೆ 60 ರೂಪಾಯಿ ಇದೆ. ನೀವು ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿ ಕೊಡುವುದಾಗಿ ಹೇಳಿದ್ದೀರಿ. ಹಾಗಾದರೆ ನೀವು ಎರಡೂವರೆ ಕೆಜಿ ಅಕ್ಕಿಗೆ ಹಣ ನೀಡುತ್ತಿದ್ದೀರಿ. ಕೇಂದ್ರ ಸರ್ಕಾರ ಪಡಿತರದಾರರಿಗೆ 5 ಕೆಜಿ ಅಕ್ಕಿ ಕೊಡುತ್ತಿದೆ. ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀವು 5+5 ಎಂದು ಹೇಳಿದ್ರಾ? 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೀರಿ, ಈಗ ಕೊಡಿ. ಕೇಂದ್ರದ ಬಿಜೆಪಿ ಸರ್ಕಾರದ ಮೇಲೆ ಸುಮ್ಮನೆ ಗೂಬೆ ಕೂರಿಸುತ್ತಿದ್ದೀರಿ. ರಾಜ್ಯದ ಜನರಿಗೆ ನೀವು ಮೋಸ ಮಾಡಿದ್ದೀರಿ ಎಂದು ಬೊಮ್ಮಾಯಿ ಕಿಡಿ ಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!