June 3, 2026
Wednesday, June 3, 2026
spot_img

ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಇಂದು ರಾಜೀನಾಮೆ? ಸಚಿವ ಸಂಪುಟ ಸೇರ್ಪಡೆಗೆ ಕ್ಷಣಗಣನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳವಣಿಗೆಯೊಂದರಲ್ಲಿ, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಇಂದು ತಮ್ಮ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ಹೊಸ ಸಂಪುಟ ಸೇರ್ಪಡೆಯ ಹಿನ್ನೆಲೆಯಲ್ಲಿ ಅವರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.

ಇಂದೇ ಡೆಪ್ಯುಟಿ ಸ್ಪೀಕರ್‌ಗೆ ರಾಜೀನಾಮೆ ಪತ್ರ ಸಲ್ಲಿಕೆ?

ಕಾಂಗ್ರೆಸ್ ಹೈಕಮಾಂಡ್‌ನಿಂದ ಸಚಿವ ಸ್ಥಾನದ ಬಗ್ಗೆ ಅಧಿಕೃತ ಸಂದೇಶ ಅಥವಾ ಸಮ್ಮತಿ ಸಿಗುತ್ತಿದ್ದಂತೆಯೇ, ಯು.ಟಿ. ಖಾದರ್ ಅವರು ಇಂದು ಮಧ್ಯಾಹ್ನದ ವೇಳೆಗೆ ಉಪಸಭಾಪತಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಬೆಂಗಳೂರಿಗೆ ಆಗಮಿಸಿರುವ ಅವರು, ತಮ್ಮ ಆಪ್ತರು ಹಾಗೂ ಬೆಂಬಲಿಗರೊಂದಿಗೆ ಈ ಕುರಿತು ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಚಿವ ಸ್ಥಾನ ಸಿಗುವ ವಿಶ್ವಾಸ:

ಖಾದರ್ ಅವರು ಸ್ಪೀಕರ್ ಹುದ್ದೆಗಿಂತ ಸಚಿವರಾಗಿ ಸಾರ್ವಜನಿಕ ಸೇವೆ ಮಾಡಲು ಹೆಚ್ಚು ಆಸಕ್ತಿ ಹೊಂದಿದ್ದಾರೆ ಎನ್ನಲಾಗುತ್ತಿದ್ದು, ಮುಂಬರುವ ಸಂಪುಟ ಸೇರ್ಪಡೆ ಪಟ್ಟಿಯಲ್ಲಿ ಅವರ ಹೆಸರು ಮುಂಚೂಣಿಯಲ್ಲಿದೆ. ಅಧಿಕೃತ ಆದೇಶ ಹೊರಬೀಳುತ್ತಿದ್ದಂತೆಯೇ ಸಂವಿಧಾನಾತ್ಮಕ ಹುದ್ದೆಗೆ ವಿದಾಯ ಹೇಳಿ, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಿದ್ಧವಾಗುತ್ತಿದೆ. ಈ ಬೆಳವಣಿಗೆಯಿಂದಾಗಿ ಕರಾವಳಿ ಭಾಗದ ರಾಜಕೀಯದಲ್ಲೂ ಹೊಸ ಸಂಚಲನ ಸೃಷ್ಟಿಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !