ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ವರದಿ, ಮಂಜೇಶ್ವರ:
ಧರ್ಮ ರಕ್ಷಣೆಗೆ ಯುವ ಸಮುದಾಯವು ಸನ್ನದ್ಧರಾಗಬೇಕು. ಈ ನಿಟ್ಟಿನಲ್ಲಿ ಪಣತೊಡಬೇಕು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ದೇಶದ ಸಂಸ್ಕೃತಿಯ ಪ್ರತೀಕ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ ಮಂಜೇಶ್ವರ ಹೊಸಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಮೂರನೇ ದಿನವಾದ ಭಾನುವಾರ ಜರಗಿದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಅವರು ಆಶೀರ್ವಚನ ನೀಡಿದರು. ಯುವ ಜನತೆಯು ದೇಶ ಸೇವೆ ಹಾಗೂ ಧರ್ಮರಕ್ಷಣೆಗೆ ಮುಂದಾಗಬೇಕು. ಈ ಹಿನ್ನೆಲೆಯಲ್ಲಿ ಹಿಂಜರಿಯಬಾರದು ಎಂದವರು ನುಡಿದರು.
ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪದ್ಮನಾಭ ಕಡಪ್ಪುರ, ಪ್ರಮುಖರಾದ ಚಿದಾನಂದ ಆಚಾರ್ಯ, ಕೃಷ್ಣಪ್ಪ ಪೂಜಾರಿ, ಆದರ್ಶ್ ಬಿ.ಎಂ., ಚಂದ್ರ ಪೆಲಪ್ಪಾಡಿ, ಅವಿನಾಶ್ ಹೆಗ್ಡೆ , ವಕೀಲ ನವೀನ್ ರಾಜ್ ಕೆ.ಜೆ. ಮೊದಲಾದವರು ಉಪಸ್ಥಿತರಿದ್ದರು.
ಇದೇ ವೇಳೆ ಮಂಜೇಶ್ವರ ಹೊಸಂಗಡಿ ಶ್ರೀ ಗಣೇಶೋತ್ಸವದ ಮೂರನೇ ದಿನದ ಕಾರ್ಯಕ್ರಮದಲ್ಲಿ ಬಿಜೆಪಿ ನೇತಾರ, ಕರ್ನಾಟಕ ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಭಾವಹಿಸಿದ್ದರು.