Sunday, June 26, 2022

Latest Posts

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ಕೊಡಿಸಲು ನಿರ್ಲಕ್ಷ್ಯದ ಆರೋಪ: ತಹಸೀಲ್ದಾರ್‌ಗೆ ನೋಟಿಸ್ ನೀಡಿದ ಜಿಲ್ಲಾಧಿಕಾರಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………

ಹೊಸ ದಿಗಂತ ವರದಿ, ಮೈಸೂರು:

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ಕೊಡಿಸುವ ವಿಚಾರವಾಗಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಮೈಸೂರು ಜಿಲ್ಲೆಯ ಕೆ.ಆರ್,ನಗರ ತಹಸಿಲ್ದಾರ್‌ಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೋಟಿಸ್ ಜಾರಿಮಾಡಿದ್ದು, ನೋಟಿಸ್ ಸಿಕ್ಕಿದ 24 ಗಂಟೆಗಳಲ್ಲಿ ಉತ್ತರಿಸುವಂತೆ ತಿಳಿಸಿದ್ದಾರೆ.
ಕೊರೋನಾ ಸೋಂಕಿತರನ್ನು ಮೈಸೂರಿನ ಆಸ್ಪತ್ರೆಗಳಿಗೆ ಸ್ಥಳಾಂತರಿಸದೇ, ತಾಲ್ಲೂಕು ಮಟ್ಟದಲ್ಲಿಯೇ ಸೂಕ್ತ ಚಿಕಿತ್ಸೆ ಒದಗಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ವೀಡಿಯೊ ಕಾನ್ಫರೆನ್ಸ್ನಲ್ಲಿ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದರು. ಆದರೆ, ಕೆ.ಆರ್.ನಗರ ತಾಲ್ಲೂಕಿನ ಸೋಂಕಿತ ವ್ಯಕ್ತಿಗೆ ಅಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕ್ರಮವಹಿಸದೇ, ಮೈಸೂರಿನ ಆಸ್ಪತ್ರೆಗೆ ಸ್ಥಳಾಂತರಿಸಿ ತಹಸಿಲ್ದಾರ್ ಕರ್ತವ್ಯ ಲೋಪ ಎಸಗಿದ್ದಾರೆ. ಮೈಸೂರು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದೇ ಸೋಂಕಿತ ಸಾವಿಗೀಡಾಗಿದ್ದಾನೆ. ಈ ಹಿನ್ನಲೆಯಲ್ಲಿ ವಿವರಣೆ ಕೇಳಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕೆ.ಆರ್.ನಗರ ತಹಸೀಲ್ದಾರ್‌ಗೆ ನೋಟಿಸ್ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss