Thursday, August 11, 2022

Latest Posts

ಹೊರ ಜಿಲ್ಲೆಯಿಂದ ಕೊಡಗು ಜಿಲ್ಲೆಗೆ ಬಂದವರಿಗೆ ಕ್ವಾರಂಟೈನ್ ಕಡ್ಡಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯ ಗಡಿಭಾಗದ ಚೆಕ್ ಪೋಸ್ಟ್ ಗಳ ಮೂಲಕ ಹೊರಜಿಲ್ಲೆಗಳಿಂದ ಕೊಡಗು ಜಿಲ್ಲೆಗೆ ಬರುವವರನ್ನು ಪರಿಶೀಲಿಸಲಾಗುತ್ತದೆ. ಜಿಲ್ಲೆಗೆ ಭೇಟಿ ನೀಡುತ್ತಿರುವುದರ ಉದ್ದೇಶ, ದಾಖಲಾತಿಗಳ ಪರಿಶೀಲನೆಯನ್ನು ನಡೆಸಿ ದಿನದ 24 ಗಂಟೆಯೂ ಪಾಳಿ ವ್ಯವಸ್ಥೆಯಲ್ಲಿ ದಾಖಲು ಮಾಡಲಾಗುತ್ತದೆ.
ಚೆಕ್ ಪೋಸ್ಟ್ ನಲ್ಲಿ ಸೂಕ್ತ ಪರಿಶೀಲನೆ ಕೈಗೊಂಡ ಬಳಿಕವೇ ಕೊಡಗಿಗೆ ಪ್ರವೇಶ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಚೆಕ್ ಪೋಸ್ಟ್ ನಲ್ಲಿ ಪೊಲೀಸ್, ಕಂದಾಯ, ಅರಣ್ಯ , ಅಬಕಾರಿ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತದೆ. ಕೋರೋನಾ ಸೋಂಕು ಹೆಚ್ಚಿರುವ ಹೊರಜಿಲ್ಲೆಗಳಿಂದ ಕೊಡಗು ಜಿಲ್ಲೆಗೆ ಬರುವವರ ಮೊಬೈಲ್ ಸಂಖ್ಯೆ ಪಡೆದು ಅವರು ತಂಗುವ ಸ್ಥಳದ ಮಾಹಿತಿ ಪಡೆದು ಅವರ ಕೈಗೆ ಮೊಹರು ಹಾಕಿ 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈ ರೀತಿ ಜಿಲ್ಲೆಗೆ ಬಂದವರು ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿರಬೇಕು. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್, ಸ್ಥಳೀಯ ಸಂಸ್ಥೆಗಳು ಪೊಲೀಸ್, ಕಂದಾಯ, ಆರೋಗ್ಯ, ಇಲಾಖೆಯವರನ್ನೊಳಗೊಂಡ ಕಾಯ೯ಪಡೆಯವರು ಪರಿಶೀಲನೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೊರೋನಾ ಕತ೯ವ್ಯಕ್ಕೆ ನಿಯೋಜಿತರಾದ ನೋಡಲ್ ಅಧಿಕಾರಿಗಳು ಜಿಲ್ಲೆಗೆ ಬಂದವರ ಕೈಗಳಿಗೆ ಮೊಹರು ಹಾಕಿರುವ ಬಗ್ಗೆ ಹಾಗೂ ಕ್ವಾರಂಟೈನ್ ನಲ್ಲಿರುವ ಬಗ್ಗೆ ಕಡ್ಡಾಯವಾಗಿ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಚಾರುಲತಾ ಸೋಮಲ್ ವಿವರಿಸಿದ್ದಾರೆ.
ಈ ಆದೇಶದ ಉಲ್ಲಂಘನೆ ಮಾಡಿದವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಅವರು ಎಚ್ಚರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss