Wednesday, July 6, 2022

Latest Posts

ಲಾಕ್‌ಡೌನ್ ನಿಯಮ ಉಲ್ಲಂಘಿಸಿದವರಿಗೆ ಬಿತ್ತು ದಂಡದ ಬಿಸಿ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………


ಹೊಸ ದಿಗಂತ ವರದಿ, ಚಿತ್ರದುರ್ಗ:

ಕೊರೋನಾ ಅಲೆ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಲಾಕ್‌ಡೌನ್ ಘೋಷಿಸಲಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದ ಅನೇಕ ಜನರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ.
ಕೊರೋನಾ ನಿಯಮಾವಳಿ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 10 ಪ್ರಕರಣಗಳನ್ನು ದಾಖಲಿಸಲಾಗಿದೆ. 40 ಜನರನ್ನು ಬಂಧಿಸಿ 34 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಸ್ಕ್ ಧರಿಸದಿರುವ ಜನರ ವಿರುದ್ಧ 248 ಪ್ರಕರಣಗಳನ್ನು ದಾಖಲಿಸಲಾಗಿದೆ. 24,800 ರೂ. ಮೊತ್ತದ ದಂಡ ಸಂಗ್ರಹಿಸಲಾಗಿದೆ. ಅದರಂತೆ ಸಾಮಾಜಿಕ ಅಂತರ ಕಾಪಾಡದಿರುವ ಕುರಿತು 24 ಪ್ರಕರಣಗಳನ್ನು ದಾಖಲಿಸಿ, 2400 ರೂ. ದಂಡ ಸಂಗ್ರಹಿಸಲಾಗಿದೆ.
ಚಿತ್ರದುರ್ಗ ನಗರದ ಚಳ್ಳಕೆರೆ ಸರ್ಕಲ್‌ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಮಾಸ್ಕ್ ಧರಿಸದೆ, ಅನಾವಶ್ಯಕವಾಗಿ ತಿರುಗಾಡುತ್ತಿದ್ದ ಇಬ್ಬರು ವ್ಯಕ್ತಿಗಳಿಂದ ಎರಡು ಮೋಟಾರ್ ಸೈಕಲ್‌ಗಳ ವಶ. ಹೊಸದುರ್ಗ ನಗರದಲ್ಲಿ ಮೈಕ್‌ನಲ್ಲಿ ಕೊರೋನಾ ನಿಯಮ ಪಾಲಿಸುವಂತೆ ಪ್ರಕಟಣೆಗಳನ್ನು ತಿಳಿಸುತ್ತಿದ್ದರೂ ಉದ್ಧಟತನದಿಂದ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಚಿತ್ರದುರ್ಗ ನಗರದ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಅನಾವಶ್ಯಕವಾಗಿ ಓಡಾಡುತ್ತಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ಎರಡು ಮೋಟಾರ್ ಸೈಕಲ್‌ಗಳ ವಶ. ಹೊಳಲ್ಕೆರೆ ಪಟ್ಟಣದ ಮುಖ್ಯ ವೃತ್ತದಲ್ಲಿ ತಿರುಗಾಡುತ್ತಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ಎರಡು ಮೋಟಾರ್ ಸೈಕಲ್‌ಗಳ ವಶ.
ಐಮಂಗಲದ ಗುಯಿಲಾಳ ಟೋಲ್ ಬಳಿ ತಿರುಗಾಡುತ್ತಿದ್ದ ಮೂವರ ವಿರುದ್ಧ ಪ್ರಕರಣ ದಾಖಲಿಸಿ ಎರಡು ಕಾರು, ಒಂದು ಮೋಟಾರ್ ಸೈಕಲ್‌ಗಳ ವಶಪಡಿಸಿಕೊಳ್ಳಲಾಗಿದೆ. ಹಿರಿಯೂರು ನಗರದ ವೃತ್ತ ಮತ್ತು ಇತರೆ ಕಡೆಗಳಲ್ಲಿ ಕೊರೋನಾ ನಿಯಮಾವಳಿ ಉಲ್ಲಂಘಿಸಿದ 13 ಜನರ ವಿರುದ್ಧ ಪ್ರಕರಣ ದಾಖಲಿಸಿ 1 ಅಟೋ, 12 ಮೋಟಾರ್ ಸೈಕಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪರಶುರಾಂಪುರದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದ 5 ಜನರನ್ನು ಬಂಧಿಸಲಾಗಿದೆ. ಮೊಳಕಾಲ್ಮೂರು ಅನಾವಶ್ಯಕವಾಗಿ ಓಡಾಡುತ್ತಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ಎರಡು ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಂಡಿದೆ. 10 ಜನರ ವಿರುದ್ಧ ಪ್ರಕರಣ ದಾಖಲಿಸಿ 5 ಆಟೋ 5 ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss