ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಎಂ.ಎಸ್ ನಗರದಲ್ಲಿ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದೆ, ಸುಖನಿದ್ದೆಯಲ್ಲಿದ್ದ ಇಡೀ ಕುಟುಂಬಕ್ಕೆ ಶೇ.90 ರಷ್ಟು ಸುಟ್ಟ ಗಾಯಗಳಾಗಿವೆ.
ಬೆಂಕಿಯ ಜ್ವಾಲೆಗೆ ಮನೆಯಲ್ಲಿದ್ದ ಗಂಡ-ಹೆಂಡತಿ ಮೂರು ಜನ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ನೇಪಾಳ ಮೂಲದ ಕುಟುಂಬ ಸಂಪಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅಡುಗೆ ಸಿಲಿಂಡರ್ ಸ್ಫೋಟಕ್ಕೆ ಒಂದೇ ಕುಟುಂಬದ ಪತಿ, ಪತ್ನಿ ಹಾಗೂ ಮೂರು ಮಕ್ಕಳಿಗೆ ಗಂಭೀರ ಸುಟ್ಟ ಗಾಯಗಳಾಗಿದೆ.
ಮದನ್ ಚೌಹಾರ (37) ಹೆಂಡತಿ ಪ್ರೇಮ್ ಜಾಲ (28) ಮಕ್ಕಳಾದ ಹಿರದ್ (12) ಪ್ರಶಾಂತ್ (06) ಅನಿತಾ (8) ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.