ಹೊಸ ದಿಗಂತ ವರದಿ, ಮೈಸೂರು:
ಕೊರೋನಾದಿಂದಾಗಿ ಸಂಕಷ್ಟಕ್ಕೀಡಾಗಿರುವ ಕಾರ್ಮಿಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಆಗ್ರಹಿಸಿ ಶನಿವಾರ ನಗರದಲ್ಲಿ ಜೈಭೀಮ್ ಜನಸ್ಪಂದನ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗಾಂಧಿನಗರದ ಅಣ್ಣಮ್ಮ ದೇವಸ್ಥಾನದ ರಸ್ತೆಯಲ್ಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಎಂದು ಭಿತ್ತಿಪತ್ರ ಹಿಡಿದ ಪ್ರತಿಭಟನಾಕಾರರು ಕೆಲಕಾಲ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಜೈಭೀಮ್ ಜನಸ್ಪಂದನ ವೇದಿಕೆ ಅಧ್ಯಕ್ಷರಾದ ಚೇತನ್ ಕಾಂತರಾಜು, ಸರ್ಕಾರ ಕಾರ್ಮಿಕರ ಪರವಾದ ನಿಲುವನ್ನು ಕಾರ್ಮಿಕ ದಿನಾಚರಣೆ ಹಿನ್ನೆಲೆಯಲ್ಲಿ ಈ ಕೂಡಲೇ ಪ್ರಕಟಿಸಬೇಕು .ಇದರಿಂದಾಗಿ ಇಲ್ಲಿಯವರೆಗೂ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸಕಾಲದಲ್ಲಿ ಆರ್ಥಿಕ ನೆರವು ಸಿಕ್ಕಂತಾಗುತ್ತದೆ ಎಂದು ಆಗ್ರಹಿಸಿದರು .
ಕಳೆದ 1ವರ್ಷದಿಂದ ಮಹಾಮಾರಿ ಕೊರೋನಾ ವ್ಯತಿರಿಕ್ತವಾದ ಪರಿಣಾಮದಿಂದ ಕಾರ್ಮಿಕರಿಗೆ ಸರಿಯಾಗಿ ಕೆಲಸವೂ ಇಲ್ಲದಂತಾಗಿದೆ ಸರ್ಕಾರ ನೋಂದಾಯಿತ ಕಾರ್ಮಿಕರಿಗೆ ಆರ್ಥಿಕ ಸಹಾಯ ಘೋಷಿಸಿದೆ. ಅದರೆ 1 ವರ್ಷವಾದರೂ ಸಹಾಯಧನ ಹಾಗೂ ಪೂರ್ಣ ಪ್ರಮಾಣದ ನೆರವಿಗೆ ಬಂದಿಲ್ಲ .ಕಳೆದ 5ವರ್ಷಗಳಿಂದ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ .ಕಳೆದ 4ವರ್ಷದಿಂದ ಕಾರ್ಮಿಕರ ಚಿಕಿತ್ಸೆಗೆ ಸಹಾಯಧನ ಬರದೇ ಕಾರ್ಮಿಕರು ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದರು.
ಕಾರ್ಮಿಕ ಕಲ್ಯಾಣ ಮಂಡಳಿಯು ಪ್ರತಿ ಕಾರ್ಮಿಕರಿಗೆ ಕಳೆದ ವರ್ಷದ ಮಹಾಮಾರಿ ಕೊರೋನಾ ಸಂದರ್ಭದಲ್ಲಿ ಆರ್ಥಿಕ ಸಹಾಯ ಧನವನ್ನು ನೀಡಬೇಕು ಎಂದು ಆಗ್ರಹಿಸಿದರು ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್ಡೌನ್ ಘೋಷಣೆ ಮಾಡಿದೆ. ಸರ್ಕಾರ ವಲಸಿಗರಿಗೆ, ಕಾರ್ಮಿಕರಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು. 14 ದಿನಗಳ ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾದ ಕಾರ್ಮಿಕರಿಗೆ 10 ಕೆ.ಜಿ ಆಹಾರ ಧಾನ್ಯ ಹಾಗೂ 10 ಸಾವಿರ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದರು.
ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಸರ್ಕಾರ ಯಾವುದೇ ನೆರವು ಘೋಷಣೆ ಮಾಡಿಲ್ಲ. ಇವತ್ತಿನವರೆಗೂ ಕೇಂದ್ರ ಆಗಲಿ, ರಾಜ್ಯ ಸರ್ಕಾರ ಆಗಲಿ ಯಾವುದೇ ಆರ್ಥಿಕ ಸಹಾಯ ಘೋಷಣೆ ಮಾಡಿಲ್ಲ. ಈ ಕೂಡಲೇ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವೇದಿಕೆಯ ಉಪಾಧ್ಯಕ್ಷರಾದ ಶೇಖರ್,ಪ್ರಧಾನ ಕಾರ್ಯದರ್ಶಿಯಾದ ಪ್ರಕಾಶ್,ಸಹಕಾರ್ಯದರ್ಶಿ ಶ್ರೀಕಾಂತ್,