ಲಿಂಗಾಯತ ಸಮುದಾಯವನ್ನು ಪ್ರವರ್ಗ2ಎ ಸೇರಿಸಲು ಒತ್ತಾಯಿಸಿ ಪಾದಯಾತ್ರೆ

ಹೊಸದಿಗಂತ ವರದಿ, ಶಿವಮೊಗ್ಗ:

ಎರಡು ವರ್ಷಗಳಿಂದ ಕೂಡಲಸಂಗಮ ಪಂಚಮಸಾಲಿ ಪೀಠದಿಂದ ರಾಜ್ಯಾದ್ಯಂತ ನಿರಂತರವಾಗಿ ಲಿಂಗಾಯಿತ ಪಂಚಮಸಾಲಿ, ಮಲೆಗೌಡ ಲಿಂಗಾಯತ ಸಮುದಾಯವನ್ನು ರಾಜ್ಯಸರ್ಕಾರದ 2ಎಮೀಸಲಾತಿಗೆ ಒಳಪಡಿಸುವಂತೆ ನಿರಂತರ ಹೋರಾಟ ಮಾಡುತ್ತಿದ್ದರೂ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಲಿಂಗಾಯತಪಂಚಮ ಸಾಲಿ ಮಹಾಪೀಠದ ಗೌರವಾಧ್ಯಕ್ಷ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್, ಪಂಚಮಸಾಲಿ ಮಹಾಸಭಾ ಧರ್ಮಕ್ಷೇತ್ರ ಕೂಡಲಸಂಗಮ ಜಿಲ್ಲಾಘಟಕ ವತಿಯಿಂದ ಗುರುವಾರಲಿಂಗಾಯತ ಪಂಚಮಸಾಲಿ, ಲಿಂಗಾಯತಮಲೆ ಗೌಡ ಸಮುದಾಯವನ್ನು ಪ್ರವರ್ಗ2ಎ ಸೇರಿಸುವಂತೆ ಒತ್ತಾಯಿಸಿ ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆ ಹಾಗೂ ಬಹಿರಂಗ ಸಭೆಯಲ್ಲಿ ಮಾತನಾಡಿದರು.
ಲಿಂಗಾಯತ ಸಮಾಜ ಎಲ್ಲಾ ಉಪ ಪಂಗಡಗಳನ್ನು ಕೇಂದ್ರ ಸರ್ಕಾರ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಹಕ್ಕೊತ್ತಾಯದಿಂದ ಮೀಸಲಾತಿ ಚಳವಳಿ ನಡೆಸಲಾಗುತ್ತಿದೆ. ಈಗಾಗಲೇ 10 ಲಕ್ಷಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಿ ನಿರಂತರ ಪಾದಯಾತ್ರೆ ಮೂಲಕ ಹಕ್ಕೊತ್ತಾಯ ಮಾಡುವುದು, ರಾಜ್ಯದಾದ್ಯಂತ ಹರಿದು ಹಂಚಿಹೋಗಿರುವ ಪಂಚಮಸಾಲಿ ಸಮುದಾಯವನ್ನು ಒಗ್ಗೂಡಿಸಲು ಯತ್ನ ನಡೆಸಲಾಗುತ್ತಿದೆ ಎಂದರು.
2ಎ ಮೀಸಲಾತಿ ನೀಡುವುದಾಗಿ ಮಾಜಿ ಸಿಎಂ ಯಡಿಯೂರಪ್ಪನವರು ಹಾಗೂ ಸಿಎಂ ಬಸರಾಜ್ ಬೊಮ್ಮಾಯಿ ನೀಡಿರುವ ಗಡುವು ಈಗಾಗಲೇ ಮುಗಿದಿದೆ. ಸರ್ಕಾರ ಒಂದು ನಿರ್ಧಾರಕ್ಕೆ ಬರುವವರೆಗೆ ನಿರಂತರಾಗಿ ಬೇರೆ ಬೇರೆ ಹಂತಗಳಲ್ಲಿ ಹೋರಾಟ ನಡೆಸಲಾಗುತ್ತದೆ ಎಂದರು.
ನಂತರ ಸಂಸದ ರಾಘವೇಂದ್ರ ಅವರಿಗೆ ಜ್ಞಾಪನ ಪತ್ರ ಸಲ್ಲಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!