ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಡಿತರ ಚೀಟಿದಾರರಿಗೆ ರಾಷ್ಟ್ರಧ್ವಜವನ್ನು ಖರೀದಿಸುವಂತೆ ನ್ಯಾಯಬೆಲೆ ಅಂಗಡಿಯವರು ಒತ್ತಾಯಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ತ್ರಿವರ್ಣ ನಮ್ಮ ಹೆಮ್ಮೆ. ಅದು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದೆ . ಆದರೆ ಬಿಜೆಪಿ ರಾಷ್ಟ್ರೀಯತೆ ಮಾರಾಟ ಮಾಡುತ್ತಿದೆ. ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಟೀಕಿಸಿದ್ದಾರೆ.
ಪಡಿತರ ನೀಡುವಾಗ ಬಡವರಿಗೆ ತ್ರಿವರ್ಣ ಧ್ವಜಕ್ಕಾಗಿ 20 ರೂ. ಕೊಡುವಂತೆ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ತ್ರಿವರ್ಣ ಧ್ವಜದ ಜೊತೆಗೆ, ಬಿಜೆಪಿ ಸರ್ಕಾರವು ನಮ್ಮ ದೇಶದ ಬಡವರ ಸ್ವಾಭಿಮಾನದ ಮೇಲೂ ದಾಳಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.