ಮಹಿಳೆಗೆ ಕಪಾಳ ಮೋಕ್ಷ: ಸಚಿವ ವಿ. ಸೋಮಣ್ಣ ವಿರುದ್ಧ ದೂರು ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಿಳೆಯೊಬ್ಬರಿಗೆ ಕಪಾಳ ಮೋಕ್ಷ ಮಾಡಿದ ಪ್ರಕರಣದಲ್ಲಿ ,ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದೆ.
ವಿ.ಸೋಮಣ್ಣ ಅವರು ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಸರ್ಕಾರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದೆ.
ವಸತಿ ಸಚಿವ ವಿ.ಸೋಮಣ್ಣ ಚಾಮರಾಜನಗರದಲ್ಲಿ ವಿವಿಧ ಕಾರ್ಯಕ್ರಮದ ನಿಮಿತ್ತ ತೆರಳಿದಂತ ಸಂದರ್ಭದಲ್ಲಿ, ಪರಿಶಿಷ್ಟ ಮಹಿಳೆಯೊಬ್ಬರು ತಮಗೆ ನಿವೇಶನ ಹಂಚಿಕೆ ಆಗಿಲ್ಲ. ದಯವಿಟ್ಟು ಕೊಡಿಸುವಂತೆ ಮನವಿ ಮಾಡಿಕೊಳ್ಳಲು ಮುಂದಾಗಿದ್ದರು. ಅಲ್ಲದೇ ಸಚಿವರ ಕಾಲಿಗೆ ಬಿದ್ದು ಕೇಳಿಕೊಂಡಿದ್ದರು.ಮಹಿಳೆಯ ವರ್ತನೆಯಿಂದ ಸಿಡಿಮಿಡಿಗೊಂಡಂತ ವಸತಿ ಸಚಿವ ವಿ.ಸೋಮಣ್ಣ ಅವರು ದಿಢೀರ್ ಮಹಿಳೆಯ ಕೆನ್ನೆಗೆ ಬಾರಿಸಿ ಕಪಾಳ ಮೋಕ್ಷ ಮಾಡಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!