Wednesday, March 29, 2023

Latest Posts

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದ ವಿದೇಶಾಂಗ ಸಚಿವ ಎಸ್​. ಜೈಶಂಕರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾನುವಾರ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಅನುಗ್ರಹ ಸ್ವೀಕರಿಸಿದರು.

ಈ ಕುರಿತು ಅವರೇ ಟ್ವೀಟ್ಟರ್‌ನಲ್ಲಿ ಕನ್ನಡದಲ್ಲಿ ಟ್ವೀಟ್‌ ಮಾಡಿದ್ದಾರೆ. ಅವರ ಟ್ವಿಟ್ಟರ್‌ ಖಾತೆಯಲ್ಲಿ,
“ಇಂದು ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ಅನುಗ್ರಹ ಪಡೆಯಲಾಯಿತು” ಎಂದು ಬರೆದಿದ್ದಾರೆ.

ಬಳಿಕ ಅಮೃತ್ ಗಾರ್ಡನ್‌ನಲ್ಲಿ ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಟ್ಯಾಪ್ಮಿ ವಿಭಾಗ ಆಯೋಜಿಸಿದ್ದ ನಾಯಕತ್ವ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಧ್ಯಾಹ್ನ 3 ಗಂಟೆಗೆ ಮಣಿಪಾಲದ ಕಂಟ್ರಿಇನ್ ಹೋಟೆಲ್‌ನಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಪ್ರಬುದ್ಧರ ಸಮಾವೇಶದಲ್ಲಿ ಎಸ್‌.ಜೈಶಂಕರ್ ಭಾಗವಹಿಸಲಿದ್ದಾರೆ‌.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!