ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಂಘೈ ಸಹಕಾರ ಒಕ್ಕೂಟ (ಎಸ್‌ಸಿಒ) ಸರ್ಕಾರಗಳ ಮುಖ್ಯಸ್ಥರ ಮಂಡಳಿಯ 23ನೇ ಸಭೆಯಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಂಗಳವಾರ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ಗೆ ಆಗಮಿಸಿದರು.
ಜೈಶಂಕರ್ ಅವರ ವಿಮಾನವು ಪಾಕಿಸ್ತಾನದ ರಾಜಧಾನಿ ನಗರದ ಹೊರವಲಯದಲ್ಲಿರುವ ನೂರ್ ಖಾನ್ ವಾಯುನೆಲೆಯಲ್ಲಿ ಮಧ್ಯಾಹ್ನ 3:30 ರ ಸುಮಾರಿಗೆ(ಸ್ಥಳೀಯ ಕಾಲಮಾನ) ಬಂದಿಳಿಯಿತು. ಅವರನ್ನು ಪಾಕಿಸ್ತಾನದ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.
ಬಳಿಕ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರು ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ) ನಾಯಕರಿಗೆ ಆಯೋಜಿಸಿದ್ದ ಔತಣಕೂಟಕ್ಕೆ ತೆರಳಿದ್ದು, ಇಲ್ಲಿ ಪಾಕಿಸ್ತಾನಿ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಅಪರೂಪದ ಘಟನೆಯಲ್ಲಿ ಭೇಟಿ ಮಾಡಿ ಹಸ್ತಲಾಘವ ಮಾಡಿ ಶುಭಾಶಯ ವಿನಿಮಯ ಮಾಡಿಕೊಂಡರು.
SCO ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ ಮೀಟಿಂಗ್‌ನಲ್ಲಿ ನಿಯೋಗವನ್ನು ಮುನ್ನಡೆಸಲು EAM ಇಂದು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಗರಕ್ಕೆ ಆಗಮಿಸಿದ್ದಾರೆ. ಇದು 9 ವರ್ಷಗಳಲ್ಲಿ ಭಾರತದ ವಿದೇಶಾಂಗ ಸಚಿವರ ಮೊದಲ ಪಾಕಿಸ್ತಾನ ಭೇಟಿಯಾಗಿದೆ.
ಕಾಶ್ಮೀರ ಸಮಸ್ಯೆ ಮತ್ತು ಪಾಕಿಸ್ತಾನದ ಭಯೋತ್ಪಾದನೆಗೆ ಸಂಬಂಧಿಸಿದಂತೆ ಸಂಬಂಧಗಳು ಉದ್ವಿಗ್ನವಾಗಿರುವಾಗಲೇ ಸುಮಾರು ಒಂಬತ್ತು ವರ್ಷಗಳಲ್ಲಿ ಭಾರತದ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದು ಇದೇ ಮೊದಲು.