ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊರೋನಾದಿಂದ ಕಂಗೆಟ್ಟಿದ್ದ ಮೈಸೂರು ಪ್ರವಾಸೋದ್ಯಮ ಕೆಲ ವರ್ಷಗಳಿಂದ ಚೇತರಿಕೆ ಕಾಣುತ್ತಿತ್ತು. ಆದರೆ, ಇದೀಗ ಮತ್ತೆ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖ ಕಂಡು ಬಂದಿದೆ.
ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವಲ್ಲಿ ಹಾಗೂ ಪ್ರವಾಸಿ ತಾಣಗಳ ಸಾಮರ್ಥ್ಯವನ್ನು ಬಳಸಿಕೊಳ್ಳುವಲ್ಲಿ ಅಧಿಕಾರಿಗಳ ವೈಫಲ್ಯ ಅಥವಾ ವಿದೇಶಿಯರಲ್ಲಿ ಆಸಕ್ತಿಯ ಕೊರತೆಯೇ ಇದಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಪ್ರಸ್ತುತದ ಬೆಳವಣಿಗೆ ಇಲ್ಲಿನ ಪ್ರವಾಸೋದ್ಯಮವನ್ನೇ ನಂಬಿಕೊಂಡು ಬದುಕುತ್ತಿದ್ದವರಲ್ಲಿ ಕಳವಳವನ್ನುಂಟು ಮಾಡಿದೆ.
ಪ್ರತಿ ಹಣಕಾಸು ವರ್ಷದಲ್ಲಿ 3 ಲಕ್ಷದಿಂದ 3.25 ಲಕ್ಷ ವಿದೇಶಿ ಪ್ರವಾಸಿಗರು ಮೈಸೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದರು. . ಆದರೆ, ಕಳೆದ ವರ್ಷ ಈ ಸಂಖ್ಯೆ 2 ಲಕ್ಷವನ್ನು ಕೂಡ ದಾಟಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. ಪ್ರವಾಸಿಗರ ಸಂಖ್ಯೆ ಇಳಿಮುಖಕ್ಕೆ ಅಸಮರ್ಪಕ ಮೂಲಸೌಕರ್ಯ ಮತ್ತು ಪ್ರಚಾರದ ಕೊರತೆ ಸೇರಿದಂತೆ ಹಲವು ಅಂಶಗಳು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.