ಹೊಸದಿಗಂತ ವರದಿ,ಮಡಿಕೇರಿ:
ಹಾಡಹಗಲೇ ಕಾಡಾನೆ ದಾಳಿಗೆ ಟ್ರ್ಯಾಕ್ಟರ್ ಚಾಲಕರೊಬ್ಬರು ಸಾವಿಗೀಡಾದ ಘಟನೆ ಭಾನುವಾರ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರೆಕಾಡು ಗ್ರಾಮದಲ್ಲಿ ನಡೆದಿದೆ.
ಕಟ್ಡೆಮಾಡು ಸಮೀಪದ ಪರಂಬು ನಿವಾಸಿ ದೇವಪ್ಪ ಕಾಡಾನೆ ದಾಳಿಗೆ ಬಲಿಯಾದವರಾಗಿದ್ದಾರೆ.
ಭಾನುವಾರ ಹಾಡಹಗಲೇ ಅರೆಕಾಡು ನೇತಾಜಿ ನಗರದ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಕಾಣಿಸಿಕೊಂಡು ಸಾರ್ವಜನಿಕರನ್ನು ಅಟ್ಟಾಡಿಸಿದೆ. ಈ ಸಂದರ್ಭ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ದೇವಪ್ಪ ಅವರ ಮೇಲೆ ಆನೆ ಎರಗಿದೆ.
ಪರಿಣಾಮವಾಗಿ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ಭುಗಿಲೆದ್ದಿದೆ.