ಹೊಸದಿಗಂತ ವರದಿ, ಮಡಿಕೇರಿ:
ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪ್ರಕರಣ ವೀರಾಜಪೇಟೆ ತಾಲೂಕಿನ ಅಮ್ಮತ್ತಿ ಕಣ್ಣಂಗಾಲ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಅಮ್ಮತ್ತಿ ಕಣ್ಣಂಗಾಲ ಗ್ರಾಮದ ಅಯ್ಯಪ್ಪ ಅವರ ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಜಾನಕಿ (44) ಎಂಬವರೇ ಕಾಡಾನೆ ದಾಳಿಗೆ ಒಳಗಾದವರಾಗಿದ್ದಾರೆ.
ಕಾಲಿಗೆ ಗಂಭೀರ ಗಾಯಗೊಂಡಿರುವ ಅವರಿಗೆ ಅಮ್ಮತ್ತಿಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಆಸ್ಪತ್ರೆಗೆ ಕಾಂಗ್ರೆಸ್ ರಾಜ್ಯ ವಕ್ತಾರ ಸಂಕೇತ್ ಪೂವಯ್ಯ, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು.