ಹೊಸದಿಗಂತ ವರದಿ,ಮಡಿಕೇರಿ:
ದಕ್ಷಿಣ ಕೊಡಗಿನ ಕೋಣಗೇರಿ, ಬೆಳ್ಳೂರು ತೂಚಮಕೇರಿಯಲ್ಲಿನ ಗೋಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅನುಮತಿ ನೀಡಿದೆ
ಕಳೆದ ಒಂದಿ ವಾರದಲ್ಲಿ ಐದು ಹಸುಗಳನ್ನು ಹುಲಿ ಬಲಿ ಪಡೆದುಕೊಂಡಿದ್ದು, ಅರಣ್ಯ ಇಲಾಖೆಯ ವಿರುದ್ಧ ಭಾರೀ ಜನಾಕ್ರೋಶ ವ್ಯಕ್ತವಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಕೂಡಾ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿ ತುರ್ತು ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು.
ಇದೀಗ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹುಲಿ ಸೆರೆಗೆ ಹಸಿರು ನಿಶಾನೆ ತೋರಿದ್ದು, ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ನಂದಿಗಳು ತೂಚಮಕೇರಿಯಲ್ಲಿ ಸಾಕಾನೆಯೊಂದಿಗೆ ವ್ಯಾಘ್ರನ ಸೆರೆಗೆ ಸಿದ್ಧತೆ ನಡೆಸಿದ್ದಾರೆ.