ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಬಾಲಿ-ತಿರ್ಚಿ ಅರಣ್ಯ ವ್ಯಾಪ್ತಿಯಲ್ಲಿ ಬುಧವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ.
ಉಧಂಪುರದ ಬಾಲಿ-ತಿರ್ಚಿ ಅರಣ್ಯ ವ್ಯಾಪ್ತಿಯ ಕಂಪಾರ್ಟ್‌ಮೆಂಟ್ ಸಂಖ್ಯೆ 67 ರಲ್ಲಿ ಪ್ರಾರಂಭವಾದ ಬೆಂಕಿಯು ಪ್ರದೇಶದಲ್ಲಿ ಬಲವಾದ ಗಾಳಿಯಿಂದಾಗಿ ವೇಗವಾಗಿ ಹರಡಿತು.
ಅಧಿಕಾರಿಗಳ ಪ್ರಕಾರ, ಬೆಂಕಿಯಲ್ಲಿ ಎರಡು ಮನೆಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ ಮತ್ತು ಎರಡು ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ, ಎಸ್‌ಡಿಆರ್‌ಎಫ್ ತಂಡ, ಭಾರತೀಯ ಸೇನೆಯ ರಕ್ಷಣಾ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಎನ್‌ಡಿಆರ್‌ಎಫ್ ಸ್ಥಳಕ್ಕೆ ಧಾವಿಸಿದ್ದಾರೆ.
ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನಗಳು ಇನ್ನೂ ನಡೆಯುತ್ತಿವೆ ಆದರೆ ಬಲವಾದ ಗಾಳಿಯು ಬೆಂಕಿಯನ್ನು ಹೆಚ್ಚಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅರಣ್ಯ ಇಲಾಖೆ, ಅರಣ್ಯ ಸಂರಕ್ಷಣಾ ಪಡೆ, ಎಸ್‌ಡಿಆರ್‌ಎಫ್ ಮತ್ತು ಭಾರತೀಯ ಸೇನೆ ಹಾಗೂ ಅಗ್ನಿಶಾಮಕ ಮತ್ತು ತುರ್ತು ವಿಭಾಗದ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿಯನ್ನು ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ ಎಂದು ಅವರು ಹೇಳಿದರು.