ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಾಡ್ಗಿಚ್ಚಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಚಂದ್ರದ್ರೋಣ ಪರ್ವತಗಳ ಸಾಲಿನ ರಕ್ಷಣೆಗೆ ಅರಣ್ಯ ಇಲಾಖೆ ಮುಂದಾಗಿದೆ. ಅದಕ್ಕಾಗಿ ಡ್ರೋನ್‌ಗಳ ಮೊರೆ ಹೋಗಿದ್ದಾರೆ.
ಮುಳ್ಳಯ್ಯನಗಿರಿ, ದತ್ತಪೀಠದ ಗುಡ್ಡಗಳಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಿಯಂತ್ರಿಸಿ, ಕಾಡು ರಕ್ಷಣೆಗೆ ಡ್ರೋನ್ ಕಣ್ಗಾವಲಿಗೆ ಇಲಾಖೆ ಮುಂದಾಗಿದೆ.
ಡ್ರೋನ್ ಕಣ್ಗಾವಲಿನಿಂದ ಬೆಂಕಿ ಹಾಕುವವರು ಸ್ಥಳಿಯರೋ, ಪ್ರವಾಸಿಗರೋ ಅಥವಾ ನಿಜಕ್ಕೂ ಕಾಡ್ಗಿಚ್ಚೋ ಎಂಬುದನ್ನು ಗುರುತಿಸಲು ಸಹಕಾರಿಯಾಗುತ್ತದೆ. ಇದರಿಂದ ನಿತ್ಯ ಸುಟ್ಟು ಕರಕಲಾಗ್ತಿರೋ ಕಾಡಿನ ರಕ್ಷಣೆಗೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ.
ಮಂಗಳವಾರ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕ್ರೆ ಅರಣ್ಯ ಬೆಂಕಿಗಾಹುತಿಯಾಗಿತ್ತು.