ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ..

ಹೊಸದಿಗಂತ ವರದಿ ಮೈಸೂರು:

ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಇಂದು ದಸರಾ ಗಜಪಡೆ ಪೂಜೆ ಸಲ್ಲಿಸುವ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು ಮಾಡಿದ್ದಾರೆ.

ಪೂಜೆ ಸಲ್ಲಿಸುವ ವೇಳೆ ಶೂ ಧರಿಸಿಯೇ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ಸಮಯದಲ್ಲಿ ಇತರೆ ಗಣ್ಯರು ಬರಿಗಾಲಲ್ಲಿ ಪೂಜೆ ಸಲ್ಲಿಸಿದರೆ, ಉಮೇಶ್ ಕತ್ತಿ ಮಾತ್ರ ಶೂ ಧರಿಸಿದ್ದರು. ಸಂಪ್ರದಾಯವಾಗಿ ಪೂಜೆ ಸಲ್ಲಿಸುವಾಗ ಚಪ್ಪಲಿ,ಶೂ ಧರಿಸುವುದಿಲ್ಲ. ಆದ್ರೆ ಉಮೇಶ್ ಕತ್ತಿ ಎಲ್ಲವನ್ನೂ ಗಾಳಿಗೆ ತೂರಿ ಶೂ ಧರಿಸಿ ಪೂಜೆ ಸಲ್ಲಿಸುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!