ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಕಾಡಾನೆ ದಾಳಿಗೆ ಅರಣ್ಯ ವೀಕ್ಷಕ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ರಾಜಧಾನಿ ಬೆಂಗಳೂರಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ವೀಕ್ಷಕನ ಮೇಲೆ ಕಾಡಾನೆ ದಾಳಿ ಮಾಡಿದ್ದೂ, ಆತ ಸಾವನ್ನಪ್ಪಿದ್ದಾನೆ.

ಮೃತರನ್ನು ಮಹದೇವಸ್ವಾಮಿ (35) ಎಂದು ಗುರುತಿಸಲಾಗಿದ್ದು, ಇತರ ಮೂವರೊಂದಿಗೆ ಕೃಷಿ ಹೊಲಗಳಿಂದ ಕಾಡಾನೆಗಳ ಹಿಂಡನ್ನು ಓಡಿಸುತ್ತಿದ್ದಾಗ ಆನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಹಿಂದೆ ಓಡಿ ಬರುವಷ್ಟರಲ್ಲಿ ಆನೆ ಮಹದೇವಸ್ವಾಮಿ ಹಾಗೂ ರಾಜೇಶ್ ಮೇಲೆ ದಾಳಿ ಮಾಡಿದೆ. ಮಹದೇವಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ರಾಜೇಶ್ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಬಳಿಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!