ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ನೀರು ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ತಾಜ್ ಹೊಟೇಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕರ್ನಾಟಕ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ಜತೆ ಸಭೆ ನಡೆಸಿದ್ದಾರೆ.
ಸಭೆಯ ನಂತರ ಡಿಸಿಎಂ ಮಾತನಾಡಿದ್ದು, ಕಾವೇರಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದು, ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದ್ದೇವೆ. ರಾಜಕೀಯ ಏನೇ ಇರಲಿ, ನಾವು ಕನ್ನಡಿಗರು, ರೈತರಿಗಾಗಿ ನಾವೆಲ್ಲಾ ಒಗ್ಗಟ್ಟಾಗಬೇಕಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡುತ್ತೇವೆ ಎಂದಿದ್ದಾರೆ.