ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯಮಿ ಅದಾನಿ ವಿರುದ್ಧದ ಆರೋಪಗಳ ತನಿಖೆಗೆ ಜಂಟಿ ಸದನ ಸಮಿತಿ ರಚಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಅದಾನಿ ಬಗ್ಗೆ ಮಾಧ್ಯಮಗಳ ವರದಿ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿ ತನಿಖೆಗೆ ಜಂಟಿ ಸದನ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಚೀನಾದ ಪ್ರಜೆ ಭಾರತದ ಶೇರು ಮಾರುಕಟ್ಟೆಯಲ್ಲಿ ಏಕೆ ಹೂಡಿಕೆ ಮಾಡುತ್ತಿದ್ದಾರೆ. ಗೌತಮ್ ಅದಾನಿ ವಿಚಾರದಲ್ಲಿ ಪ್ರಧಾನಿ ಮೋದಿ ಏಕೆ ಮೌನ ವಹಿಸಿದ್ದಾರೆ ಎಂದು ರಾಹುಲ್ ಕೇಂದ್ರ ಸರಕಾರವನ್ನು ಪ್ರಶ್ನಿಸಿದ್ದಾರೆ.
ಪ್ರಮುಖ ಜಾಗತಿಕ ಹಣಕಾಸು ಪತ್ರಿಕೆಗಳು ಅದಾನಿ ವಿಷಯದ ಬಗ್ಗೆ ಬಹಳ ಮುಖ್ಯವಾದ ಪ್ರಶ್ನೆಗಳನ್ನು ಎತ್ತಿವೆ. ಅದಾನಿ ವಿಚಾರದಲ್ಲಿ ಸಮಗ್ರ ತನಿಖೆ ನಡೆಯಬೇಕು. ಪ್ರಧಾನಿ ಮೋದಿ ಏಕೆ ಮೌನವಾಗಿದ್ದಾರೆ? ಅವರು ಇದನ್ನು ಏಕೆ ತನಿಖೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.