Wednesday, October 5, 2022

Latest Posts

ಔಪಚಾರಿಕ ಪಂದ್ಯ: ಅಫ್ಘಾನಿಸ್ತಾನ ವಿರುದ್ಧ ಟೀಮ್‌ ಇಂಡಿಯಾ ಮೊದಲು ಬ್ಯಾಟಿಂಗ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಷ್ಯಾಕಪ್‌ನಲ್ಲಿ ಟೀಮ್‌ ಇಂಡಿಯಾ ಗುರುವಾರ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ. ಟಾಸ್‌ ಗೆದ್ದ ಅಫ್ಘಾನಿಸ್ತಾನ ತಂಡ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ರೋಹಿತ್‌ ಶರ್ಮಗೆ ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿದ್ದು, ಕೆಎಲ್ ರಾಹುಲ್‌ಗೆ ಟೀಮ್‌ ಇಂಡಿಯಾ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ.

ಪಂದ್ಯಕ್ಕಾಗಿ ಮೂರು ಬದಲಾವಣೆ ಮಾಡಲಾಗಿದ್ದು, ಯಜುವೇಂದ್ರ ಚಾಹಲ್‌, ಹಾರ್ದಿಕ್‌ ಪಾಂಡ್ಯ ಹಾಗೂ ರೋಹಿತ್‌ ಶರ್ಮ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಅವರ ಬದಲಿಗೆ ದೀಪಕ್‌ ಚಹರ್‌, ದಿನೇಶ್‌ ಕಾರ್ತಿಕ್‌ ಹಾಗೂ ಅಕ್ಸರ್‌ ಪಟೇಲ್‌ ಆಡುವ ಬಳಗಕ್ಕೆ ಬಂದಿದ್ದಾರೆ.

ಟೀಮ್‌ ಇಂಡಿಯಾ ಪ್ಲೇಯಿಂಗ್‌ ಇಲೆವೆನ್: ಕೆಎಲ್ ರಾಹುಲ್(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿ.ಕೀ), ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಆರ್ಶ್‌ ದೀಪ್‌ ಸಿಂಗ್‌.

ಅಫ್ಘಾನಿಸ್ತಾನ ಪ್ಲೇಯಿಂಗ್‌ ಇಲೆವೆನ್‌: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಇಬ್ರಾಹಿಂ ಝದ್ರಾನ್, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ಸನಾಯಕ), ಕರೀಮ್ ಜನತ್, ರಶೀದ್ ಖಾನ್, ಅಜ್ಮತುಲ್ಲಾ ಒಮರ್ಜಾಯ್, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್ ಮಲಿಕ್, ಫಜಲ್ಹಕ್ ಫಾರೂಕಿ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!