ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ಯಶಸ್ಸಿಗೆ 5 ತಂಡಗಳಿಂದ ರಾಜ್ಯಾದ್ಯಂತ ಸಭೆ: ನೆ.ಲ.ನರೇಂದ್ರಬಾಬು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌, ಬೆಂಗಳೂರು:
ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶವನ್ನು ಯಶಸ್ವಿಗೊಳಿಸಲು ಸೆ. 27ರಿಂದ ಅಕ್ಟೋಬರ್ ಮೊದಲ ವಾರದಲ್ಲಿ ಪೂರ್ವಭಾವಿ ಸಭೆಗಳು ನಡೆಯಲಿವೆ. ಇದಕ್ಕಾಗಿ ಪಕ್ಷದ ಮುಖಂಡರ ನೇತೃತ್ವದಲ್ಲಿ 5 ತಂಡಗಳನ್ನು ರಚಿಸಲಾಗಿದೆ ಎಂದು ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರಬಾಬು ತಿಳಿಸಿದ್ದಾರೆ.
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ನೇತೃತ್ವದ ಮೊದಲನೇ ತಂಡವು ಸೆ.27ರಂದು ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ, 30ರಂದು ಚಾಮರಾಜನಗರ, ಮೈಸೂರು, ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ, ಅಕ್ಟೋಬರ್ 1ರಂದು ಮಂಡ್ಯ, ಹಾಸನ ಜಿಲ್ಲೆಗಳಲ್ಲಿ, ಅ.3ರಂದು ಬೀದರ್ ಜಿಲ್ಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲಿದೆ.
ಎರಡನೇ ತಂಡದ ನೇತೃತ್ವವನ್ನು ಇಂಧನ ಸಚಿವ ಸುನೀಲ್ ಕುಮಾರ್ ಅವರು ವಹಿಸಲಿದ್ದಾರೆ. ಅವರ ತಂಡವು ಸೆ.27ರಂದು ಮಂಗಳೂರು, ಉಡುಪಿ, ಅಕ್ಟೋಬರ್ 3ರಂದು ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆ ನಡೆಸಲಿದೆ.
3ನೇ ತಂಡವು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಕಾರ್ಯ ನಿರ್ವಹಿಸಲಿದೆ. ಈ ತಂಡವು ಸೆ. 28ರಂದು ಕೋಲಾರ, ಚಿಕ್ಕಬಳ್ಳಾಪುರ, ಸೆ.29ರಂದು ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಜಿಲ್ಲೆಗಳಿಗೆ ಸಂಬಂಧಿಸಿದ ಪೂರ್ವಭಾವಿ ಸಭೆಗಳನ್ನು ನಡೆಸಲಿದೆ.
ಸಚಿವ ಭೈರತಿ ಬಸವರಾಜ್ ಅವರ ನೇತೃತ್ವದ ನಾಲ್ಕನೇ ತಂಡವು ಅಕ್ಟೋಬರ್ 1ರಂದು ಚಿತ್ರದುರ್ಗ, ದಾವಣಗೆರೆ, ಅ.2ರಂದು ಹಾವೇರಿ, ಹುಬ್ಬಳ್ಳಿ- ಧಾರವಾಡ, ಅ.3ರಂದು ತುಮಕೂರು- ಮಧುಗಿರಿ ಸಂಘಟನಾ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆಗಳನ್ನು ಏರ್ಪಡಿಸಲಿದೆ.
ಸಚಿವ ಆನಂದ್ ಸಿಂಗ್ ಅವರ ನೇತೃತ್ವದ 5ನೇ ತಂಡವು ಅಕ್ಟೋಬರ್ 1ರಂದು ವಿಜಯನಗರ, ಬಳ್ಳಾರಿ, ಅ.3ರಂದು ಬೆಳಗಾವಿ ಮತ್ತು ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಿದೆ. ಜಿಲ್ಲಾ ಸಮಿತಿ, ಜಿಲ್ಲೆಯ ಮಂಡಲ ಪದಾಧಿಕಾರಿಗಳು, ಜಿಲ್ಲೆ ಮತ್ತು ಮಂಡಲ ಸಂಯೋಜಕರು, ಹಿಂದುಳಿದ ವರ್ಗಗಳ ಶಾಸಕರು, ಮಾಜಿ ಶಾಸಕರು, ಜಿಪಂ, ತಾಪಂ ಸದಸ್ಯರು, ಎಪಿಎಂಸಿ ಸದಸ್ಯರು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಹಿಂದುಳಿದ ವರ್ಗಗಳ ಜನಪ್ರತಿನಿಧಿಗಳು ಹಾಗೂ ಹಿಂದುಳಿದ ವರ್ಗಗಳ ನಿಗಮ, ಮಂಡಳಿ ಸದಸ್ಯರು ಈ ಸಭೆಯಲ್ಲಿ ಭಾಗವಹಿಸುವಂತೆ ನೆ.ಲ.ನರೇಂದ್ರಬಾಬು ಅವರು ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!