ಸಲಿಂಗ ವಿವಾಹದ ಸಮಸ್ಯೆ ಪರಿಹರಿಸಲು ಸಮಿತಿ ರಚನೆ: ಸುಪ್ರೀಂ ಕೋರ್ಟ್’ಗೆ ಕೇಂದ್ರ ಸರ್ಕಾರ ಮಾಹಿತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಲಿಂಗ ವಿವಾಹ (Same sex marriage) ಕುರಿತಾಗಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ (LGBTQIA) ಸಲಹೆಗಳನ್ನು ಪರಿಗಣಿಸಲು ಸಮಿತಿಯನ್ನು ರಚಿಸುವುದಾಗಿ (Supreme Court) ಕೇಂದ್ರ ಸರ್ಕಾರ (Central Government) ಇಂದು ಸುಪ್ರೀಂ ಕೋರ್ಟ್‍ಗೆ ತಿಳಿಸಿದೆ.

ಲೈಂಗಿಕ ಅಲ್ಪಸಂಖ್ಯಾತ ಸಮುದಾಯ ಒಂದೇ ಲಿಂಗದ ವ್ಯಕ್ತಿಗಳೊಂದಿಗಿನ ಸಂಬಂಧದಲ್ಲಿ ಎದುರಿಸುತ್ತಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲಹೆಗಳನ್ನು ಪಡೆಯಲಾಗುವುದು. ಇದಕ್ಕಾಗಿ ಸಂಪುಟ ಕಾರ್ಯದರ್ಶಿ ನೇತೃತ್ವದ ಸಮಿತಿಯನ್ನು ರಚಿಸಲಾಗುತ್ತದೆ. ಇದರಿಂದ ಸಮುದಾಯದ ಎದುರಿಸುತ್ತಿರುವ ಸಮಸ್ಯೆಗಳನ್ನು ಕಲೆಹಾಕಲು ಅನುಕೂಲವಾಗುತ್ತದೆ ಎಂದು ಕೇಂದ್ರ ಹೇಳಿಕೊಂಡಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರದ ನಿರ್ಧಾರವನ್ನು ಪ್ರಕಟಿಸಿದರು.

ಅರ್ಜಿದಾರರು ಸಲಿಂಗ ವಿವಾಹಗಳನ್ನು ಕಾನೂನಿನಡಿಯಲ್ಲಿ ತರುವಂತೆ ವಾದಿಸಿತ್ತು. ಆದರೆ ಈ ಅರ್ಜಿಗಳಿಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಸುಪ್ರೀಂಗೆ ಸಲ್ಲಿಸಿದ ಅಫಿಡವಿಟ್‍ನಲ್ಲಿ ಕೇಂದ್ರವು, ಒಂದೇ ಲಿಂಗದ ವ್ಯಕ್ತಿಗಳು ಲೈಂಗಿಕ ಸಂಬಂಧ ಹೊಂದುವುದನ್ನು ಭಾರತೀಯ ಕುಟುಂಬದ ಪರಿಕಲ್ಪನೆಗೆ ಹೋಲಿಸಲಾಗುವುದಿಲ್ಲ ಎಂದು ಹೇಳಿತ್ತು.

ಏ.27 ರಂದು ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವುದು ಶಾಸಕಾಂಗದ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಸುಪ್ರೀಂ ಹೇಳಿತ್ತು. ಸಲಿಂಗ ಸಂಬಂಧದಲ್ಲಿರುವ ಜನರು ಬಹಿಷ್ಕಾರಕ್ಕೊಳಗಾಗದಂತೆ ನೋಡಿಕೊಳ್ಳುವ ಪ್ರಾಮುಖ್ಯತೆಯನ್ನು ಸಿಜೆಐ ಮತ್ತಷ್ಟು ಒತ್ತಿ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!