ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ ರಚನೆಯಾಗಬೇಕು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.
ವನ್ಯಮೃಗಗಳು ಆಹಾರ ಅರಸಿ ನಾಡಿಗೆ ಬರುತ್ತಿವೆ. ಅವುಗಳನ್ನು ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಬೆಂಗಳೂರಿಗೆ ಪ್ರತ್ಯೇಕ ಕ್ಷಿಪ್ರ ಕಾರ್ಯಪಡೆ ರಚನೆ ಮಾಡಬೇಕು ಎಂದು ಹೇಳಿದ್ದಾರೆ.
ಈಗಿರುವ 5 ಆನೆ ಕ್ಷಿಪ್ರ ಕಾರ್ಯಪಡೆಗಳ ಜೊತೆಗೆ ಬೆಂಗಳೂರಿನ ಬನ್ನೇರುಘಟ್ಟ ಮತ್ತು ರಾಮನಗರದಲ್ಲಿ ತಲಾ ಒಂದರಂತೆ ಎರಡು ಕಾರ್ಯಪಡೆಗಳನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ. ಚಿರತೆ, ಕರಡಿಗಳಿರುವ ಪ್ರದೇಶಗಳಲ್ಲಿ 3 ಜಿಲ್ಲೆಗಳಿಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ಸೂಚಿನೆ ನೀಡಿದ್ದಾರೆ.