ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಮಿತಿ ರಚನೆ: ಗುಜರಾತ್‍ ಸರಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಗುಜರಾತ್‍ನಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಮಿತಿ ರಚಿಸುವ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅನುಮೋದನೆ ನೀಡಿದ್ದಾರೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘವಿ ಶನಿವಾರ ಹೇಳಿದ್ದಾರೆ.
ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆ ಘೋಷಿಸುವ ಮುನ್ನವೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಸಮಿತಿಯ ಸದಸ್ಯರ ಹೆಸರುಗಳನ್ನ ಮುಖ್ಯಮಂತ್ರಿಗಳು ನಂತ್ರ ಪ್ರಕಟಿಸುತ್ತಾರೆ. ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಮಿತಿಯನ್ನ ರಚಿಸಲಾಗುವುದು.
ಇನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇದು ಐತಿಹಾಸಿಕ ನಿರ್ಧಾರವಾಗಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!