ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಯುಸೇನೆ ಮಾಜಿ ಮುಖ್ಯಸ್ಥ ಆರ್ಕೆಎಸ್ ಭದೌರಿಯಾ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಭದೌರಿಯಾ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ರಫೇಲ್ ಯುದ್ಧವಿಮಾನಗಳನ್ನು ದೇಶಕ್ಕೆ ತರುವಲ್ಲಿ ಭದೌರಿಯಾ ಪ್ರಮುಖ ಪಾತ್ರ ವಹಿಸಿದ್ದರು.
ಭದೌರಿಯಾ ಅವರು ಸೆಪ್ಟೆಂಬರ್ 2019 ರಿಂದ ಸೆಪ್ಟೆಂಬರ್ 2021 ರವರೆಗೆ ಏರ್ ಫೋರ್ಸ್ ಮುಖ್ಯಸ್ಥರಾಗಿದ್ದರು. ಭದೌರಿಯಾ, PVSM, AVSM, VM, ADC, ಪುಣೆಯ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಕೂಡ ಹೌದು.