ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ: ಪವನ್ ಕಲ್ಯಾಣ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬಂಧನವಾಗಿದ್ದು, ಇದಕ್ಕೆ ಜನಸೇನಾ ಪಕ್ಷದ ಅಧ್ಯಕ್ಷ, ನಟ ಪವನ್ ಕಲ್ಯಾಣ್ ಖಂಡನೆ ವ್ಯಕ್ತಪಡಿಸಿದ್ದಾರೆ.

‘ಚಂದ್ರಬಾಬು ನಾಯ್ಡು ಅವರ ಬಂಧನವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.ಪ್ರಜಾಪ್ರಭುತ್ವದಲ್ಲಿ ಇಂತಹ ಘಟನೆಗಳು ದುರದೃಷ್ಟಕರ. ಇಂದು ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿದ ರೀತಿ ನೋವುಂಟು ಮಾಡಿದೆ. ಇದನ್ನು ನಾವು ಬಹಿರಂಗವಾಗಿ ವಿರೋಧಿಸುತ್ತೇವೆ. ಆಡಳಿತ ಪಕ್ಷದ ಕೈಗೊಂಬೆಯಂತೆ ಅಧಿಕಾರಿಗಳು ವರ್ತಿಸುತ್ತಿರುವುದು ತೀವ್ರ ಖಂಡನೀಯ’ ಎಂದು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಕೌಶಲ್ಯಾಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅವ್ಯವಹಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯ್ಡು ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!