ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೌಶಲ್ಯ ಅಭಿವೃದ್ಧಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಆಂಧ್ರ ಪ್ರದೇಶ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಹೈಕೋರ್ಟ್ ಸೂಚನೆ ಮೇರೆಗೆ ಸಿಐಡಿ ಪೊಲೀಸರು ಚಂದ್ರಬಾಬು ನಾಯ್ಡುರನ್ನು ಇತ್ತೀಚೆಗೆ ಬಂದಿಸಿದ್ದರು.ಇದೀಗ ಚಂದ್ರಬಾಬು ನಾಯ್ಡುಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಅವರನ್ನು ಸೋಮವಾರದವರೆಗೆ ಬಂಧಿಸದಂತೆ ಸಿಐಡಿಗೆ ನಿರ್ದೇಶನ ನೀಡಿದೆ. ನಾಳೆಯ ವಿಚಾರಣೆಯವರೆಗೆ ಅಂಗಲ್ಲು ಹಿಂಸಾಚಾರ ಪ್ರಕರಣದಲ್ಲಿ ನಾಯ್ಡು ಅವರನ್ನು ಬಂಧಿಸದಂತೆ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!