ಹೊಸದಿಗಂತ ಡಿಜಿಟಲ್ ಡೆಸ್ಕ್ :
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಶುಕ್ರವಾರ ಬಿಜೆಪಿಗೆ ಸೇರಿದರು. ಅವರು ಪಕ್ಷದ ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯದಿಂದ ಕಳೆದ ಮಾರ್ಚ್ ತಿಂಗಳಿನಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು.
ಮುಂದಿನ ವರ್ಷ ಆಂಧ್ರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವನೆಗೆ ಮುನ್ನ ಬಿಜೆಪಿ ಸೇರಲು ರೆಡ್ಡಿ ನಿರ್ಧರಿಸಿದ್ದಾರೆ.
2014 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ‘ಜೈ ಸಮೈಕ್ಯಂಧ್ರ’ ಎಂಬ ಸ್ವಂತ ಪಕ್ಷವನ್ನು ಸ್ಥಾಪಿಸಿದ ಅವರು 2014ರ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರು. ನಂತರ 2018ರಲ್ಲಿ ಮತ್ತೆ ಕಾಂಗ್ರೆಸ್‌ಗೆ ಸೇರಿದ್ದರು.
ಒಂದು ದಿನದ ಹಿಂದಷ್ಟೇ ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟನಿ ಅವರು ಬಿಜೆಪಿಗೆ ಸೇರ್ಪಡೆಯಾದರು.